ರಾಯಚೂರು: ಹಮಾಲಿ ಕಾರ್ಮಿಕರಿಗೆ ಕೋವಿಡ್-19 ಲಾಕ್ಡೌನ್ ಪರಿಹಾರ ನೀಡಬೇಕು ಹಾಗೂ ವಸತಿ ಯೋಜನೆ ಅಡಿಯಲ್ಲಿ ನಿವೇಶನ ನೀಡಬೇಕು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಯಚೂರು ಎಪಿಎಂಸಿ ಗಂಜ್ ಹಮಾಲರ ಸಂಘ ಹಾಗೂ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹಮಾಲಿ ಕಾರ್ಮಿಕರಿಗೆ ಲಾಕ್ಡೌನ್ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - ಲಾಕ್ ಡೌನ್ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಯಚೂರು ಎಪಿಎಂಸಿ ಗಂಜ್ ಹಮಾಲರ ಸಂಘ ಹಾಗೂ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಎಪಿಎಂಸಿ ಕೇಂದ್ರ ಕಚೇರಿ ಮುಂದೆ ಪ್ರತಿಭಟಿಸಿ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಲಾಕ್ಡೌನ್ನಿಂದಾಗಿ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೀಡಾದ ಎಲ್ಲಾ ಹಮಾಲಿ ಕಾರ್ಮಿಕರಿಗೆ ಕೋಡಲೇ ಆರು ತಿಂಗಳು ರೂ. 7,500 ಆರ್ಥಿಕ ನೆರವು ನೀಡಬೇಕು. ಆರು ತಿಂಗಳು ವಿವಿಧ ಆಹಾರ ವಸ್ತುಗಳಿರುವ ಉಚಿತ ರೇಷನ್ ಕಿಟ್ ನೀಡಬೇಕು. ಸ್ಥಳೀಯವಾಗಿ ರಾಜ್ಯದ ಹಲವಾರು ಎಪಿಎಂಸಿಗಳಲ್ಲಿ ಮತ್ತು ನಗರ ಗ್ರಾಮೀಣ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ವಸತಿ ಯೋಜನೆ ಜಾರಿ ಮಾಡಬೇಕು. ಸುಮಾರು ಲಕ್ಷಕ್ಕೂ ಅಧಿಕ ಹಮಾಲಿ ಕಾರ್ಮಿಕರ ಉದ್ಯೋಗವನ್ನು ಇಲ್ಲವಾಗಿಸಿದ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಭವಿಷ್ಯ ನಿಧಿ ಯೋಜನೆ, ಪಿಂಚಣಿ ಜಾರಿ ಮಾಡಬೇಕು. ಯೊಜನೆಗಳ ಜಾರಿಗೆಗೆ ಸರ್ಕಾರ ಅಗತ್ಯ ಆರ್ಥಿಕ ಸಂಪನ್ಮೂಲ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೆಚ್ಚಿಸಿದ ಕೂಲಿಯೊಂದಿಗೆ ಕೆಲಸವನ್ನು 200 ದಿನಗಳಿಗೆ ಹೆಚ್ಚಿಸಬೇಕು ಎಂಬುದು ಸೇರಿದಂತೆ ಇತರೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.