ಕರ್ನಾಟಕ

karnataka

ETV Bharat / state

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ : ರಾಯಚೂರು ಜಿಲ್ಲೆಯಾದ್ಯಂತ ಇಂದು ಹೈ ಅಲರ್ಟ್​

ನಾಳೆ ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ನಗರದ ಎಸ್ಪಿ ಕಚೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತುರ್ತು ಸುದ್ದಿಗೋಷ್ಠಿ ನಡೆಸಿ ಮುಂಜಾಗೃತ ಕ್ರಮದ ಬಗ್ಗೆ ತಿಳಿಸಿದ್ದಾರೆ.

ಡಾ.ಸಿ.ಬಿ.ವೇದಮೂರ್ತಿ

By

Published : Nov 9, 2019, 2:53 AM IST

ರಾಯಚೂರು : ಇಂದು ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಡಾ. ಸಿ.ಬಿ.ವೇದಮೂರ್ತಿ

ನಗರದ ಎಸ್ಪಿ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 85 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. 40 ಸೆಕ್ಟರ್​ಗಳನ್ನು ಗುರುತಿಸಲಾಗಿದ್ದು, 20 ಕಡೆಗಳಲ್ಲಿ ನಾಗಾಬಂದಿ ಸ್ಥಾಪಿಸಲಾಗಿದೆ. 170ರಿಂದ 180 ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, 9 ವಾಚ್ ಟವರ್ ಸ್ಥಾಪಿಸಲಾಗಿದೆ. 7 ಕಡೆಗಳಲ್ಲಿ ಗುಪ್ತಚರ ನಿಯೋಜನೆ ಮಾಡಿಲಾಗಿದ್ದು, 3 ಸ್ಪೆಷಲ್​ ಕಂಟ್ರೋಲ್ ರೂಂ, 200 ಸಿಸಿಟಿವಿ, ಸಾವಿರಕ್ಕೂ ಅಧಿಕ ಪೊಲೀಸ್ ಪಹರೆಯನ್ನ ನಿಯೋಜಿಸಲಾಗಿದೆ. 4 ಕೆಎಸ್ಆರ್​ಪಿ, 10 ಡಿಆರ್ ಪೊಲೀಸ್ ತಂಡ ರಚಿಸಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದರು.

ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕ ಪ್ರಚೋದನೆ ನೀಡುವ ಪೋಸ್ಟ್​ಗಳ ಬಗ್ಗೆ ತೀರಾ ನಿಗಾವಹಿಸಲಾಗಿದ್ದು, ಬೆಳಗ್ಗೆ 6ರಿಂದ 144 ಸೆಕ್ಷನ್​ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details