ಕರ್ನಾಟಕ

karnataka

ETV Bharat / state

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದೆ ನಿರ್ಲಕ್ಷ್ಯ; ವಾಲ್ಮೀಕಿ ನಾಯಕ ಸಂಘದ ಆಕ್ರೋಶ

ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೇ ನಿರ್ಲಕ್ಷ್ಯ ವಹಿಸಿದ್ದು, ಬಿಜೆಪಿ ಪಕ್ಷ ಚುನಾವಣೆಗೂ ಮುಂಚೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಹೈದರಾಬಾದ್-ಕರ್ನಾಟಕ ಪ್ರದೇಶದ ವಾಲ್ಮೀಕಿ ನಾಯಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

By

Published : Aug 28, 2019, 5:47 PM IST

ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೆ ನಿರ್ಲಕ್ಷ್ಯ ; ವಾಲ್ಮೀಕಿ ನಾಯಕ ಸಂಘ ಆಕ್ರೋಶ

ರಾಯಚೂರು:ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೇ ನಿರ್ಲಕ್ಷ್ಯ ವಹಿಸಿದ್ದು ಬಿಜೆಪಿ ಚು ನಾವಣೆಗೂ ಮುಂಚೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಹೈದರಾಬಾದ್-ಕರ್ನಾಟಕ ಪ್ರದೇಶದ ವಾಲ್ಮೀಕಿ ನಾಯಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೆ ನಿರ್ಲಕ್ಷ್ಯ ; ವಾಲ್ಮೀಕಿ ನಾಯಕ ಸಂಘ ಆಕ್ರೋಶ

ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಿ ಈಗ ನಿರ್ಲಕ್ಷ ವಹಿಸಲಾಗಿದೆ. ಜೊತೆಗೆ ಎಸ್ಟಿ ಸಮಾಜದ ಪ್ರಮುಖ ನಾಯಕರಾದ ಬಾಲಚಂದ್ರ ಜಾರಕಿಹೊಳಿ, ರಾಯಚೂರಿನ ಶಿವನಗೌಡ ನಾಯಕ್, ಯಾದಗಿರಿಯ ರಾಜುಗೌಡರಿಗೂ ಮಂತ್ರಿಗಿರಿ ಕೊಡದೆ ಅನ್ಯಾಯ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮಾಜದ ಶೇ 80ರಷ್ಟು ಮತವನ್ನು ಪಡೆದ ಬಿಜೆಪಿ 4 ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು. ಆದರೆ ಬಿಜೆಪಿ ಸರ್ಕಾರ ಇದ್ಯಾವುದನ್ನೂ ಮಾಡದೆ ಎಸ್ಟಿ ಸಮಾಜವನ್ನು ಕೇವಲ ಓಟಿಗಾಗಿ ಬಳಸಿಕೊಂಡಿದೆ ಎಂದು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ರಘುವೀರ್ ನಾಯಕ್ ದೂರಿದ್ರು.

ಸಮಾಜಕ್ಕೆ ಆದ ಅನ್ಯಾಯವನ್ನು ಸರಿಪಡಿಸದಿದ್ದರೆ ಅನರ್ಹ ಶಾಸಕರ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಅವರು ಎಚ್ಚರಿಸಿದ್ರು.

ABOUT THE AUTHOR

...view details