ರಾಯಚೂರು:ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಜಿಲ್ಲೆಯ ಸಿಂಧನೂರು ತಾಲೂಕಿನ ಬಪ್ಪೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ರಾಯಚೂರು: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ - -committed-suicide-by-hanging
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಪ್ಪೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ
ನಾಗರಾಜ(45) ಮೃತ ವ್ಯಕ್ತಿಯೆಂದು ಗುರುತಿಸಲಾಗಿದೆ. ಸಾಲಬಾಧೆಯಿಂದ ಹೊಲದ ಗಿಡವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಖಚಿತ ಮಾಹಿತಿ ದೊರೆತಿಲ್ಲ.
ಸ್ಥಳಕ್ಕೆ ಸಿಂಧನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸುತ್ತಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.