ರಾಯಚೂರು: ಹಳ್ಳಕ್ಕೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ಸಂಭವಿಸಿದೆ.
ನಾಗಲಾಪುರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವು - ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು
ಈಜಲು ತೆರಳಿದ್ದ ಇಬ್ಬರು ಬಾಲಕರಿಗೆ ಕೆಸರಿನಲ್ಲಿ ಕಾಲು ಸಿಲುಕಿ ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ನಡೆದಿದೆ.
ಬಾಲಕರು ನೀರುಪಾಲು
ನರಸಿಂಹ (17), ವೆಂಕಟೇಶ್ (15) ಮೃತ ಬಾಲಕರು ಎಂದು ಗುರುತಿಸಲಾಗಿದೆ. ನಾಗಲಾಪುರ-ಪೂರತಿಪ್ಲಿ ಗ್ರಾಮದ ಮಧ್ಯ ಭಾಗದಲ್ಲಿ ಹಳ್ಳವಿದ್ದು, ಈಜಲು ಬಾಲಕರಿಬ್ಬರು ತೆರಳಿದ್ದರು. ಈ ವೇಳೆ ಕೆಸರಿನಲ್ಲಿ ಕಾಲು ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಈ ಕುರಿತು ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಲಕರ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.