ರಾಯಚೂರು: ರಾತ್ರಿ ಸುರಿದ ಭಾರಿ ಮಳೆಯಿಂದ ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಮಳೆಯಿಂದ ಆಗುತ್ತಿರುವ ತೊಂದರೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರ ಒತ್ತಾಯಿಸಿದ್ದಾರೆ.
ತಗ್ಗು ಪ್ರದೇಶಗಳಿಗೆ ನುಗ್ಗಿದ ಮಳೆ ನೀರು, ಶಾಶ್ವತ ಪರಿಹಾರಕ್ಕೆ ಜನರ ಒತ್ತಾಯ - raichur leatest news
ನಗರದ ತಗ್ಗು ಪ್ರದೇಶಗಾಳದ ಸೀಯಾತಲಾಬ, ಕಾಕಿನ ಕೆರೆ, ಭಸವನಭಾವಿ ವೃತ್ತ, ನೀರಭಾವಿ ಕುಂಟೆ ಸೇರಿದಂತೆ ಇತರೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ರಾತ್ರಿ ಸುರಿದ ಮಳೆಯಿಂದ ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳು ಹಾನಿಗೀಡಾಗಿದ್ದು, ಸ್ಥಳೀಯರು ಹಾಗೂ ಜಿಲ್ಲಾಡಳಿತದಿಂದ ಆಹಾರ ಪೊಟ್ಟಣ ವಿತರಿಸಲಾಗಿತ್ತು.
ನಗರದ ತಗ್ಗು ಪ್ರದೇಶಗಾಳದ ಸೀಯಾತಲಾಬ, ಕಾಕಿನ ಕೆರೆ, ಭಸವನಭಾವಿ ವೃತ್ತ, ನೀರಭಾವಿ ಕುಂಟೆ ಸೇರಿದಂತೆ ಇತರೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ರಾತ್ರಿ ಸುರಿದ ಮಳೆಯಿಂದ ದವಸ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳು ಹಾನಿಗಿಡಾಗಿದ್ದು, ಸ್ಥಳೀಯರು ಹಾಗೂ ಜಿಲ್ಲಾಡಳಿತದಿಂದ ಆಹಾರ ಪೊಟ್ಟಣ ವಿತರಿಸಲಾಗಿತ್ತು.
ಇಂದು ಮಳೆ ಸ್ವಲ್ಪ ಬಿಡುವು ನೀಡಿದ್ದು, ಮನೆಗೆ ನುಗ್ಗಿದ ನೀರನ್ನು ಹೊರ ಹಾಕಿ ಮನೆ ಸ್ವಚ್ಛತೆ ಮಾಡಲಾಯಿತು. ತಗ್ಗು ಪ್ರದೇಶದ ಜನರಿಗೆ ಪ್ರತಿವರ್ಷ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುವುದು ಅದರಿಂದ ಹಾನಿ ಸಂಭವಿಸುವುದು ಸಾಮಾನ್ಯವಾಗಿದ್ದು, ಇದರಿಂದ ಶಾಶ್ವತ ಪರಿಹಾರ ಕಲ್ಪಿಸಬೇಕು ಎನ್ನುವುದು ಸ್ಥಳೀಯ ನಿವಾಸಿಗಳ ಒತ್ತಾಯವಾಗಿದೆ.