ಕರ್ನಾಟಕ

karnataka

ETV Bharat / state

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ.. ಆರೋಪಿಗೆ ನ್ಯಾಯಾಂಗ ಬಂಧನ.. - ಲಿಂಗಸುಗೂರು ಲೇಟೆಸ್ಟ್ ನ್ಯೂಸ್

ನಿನ್ನೆ ಮಧ್ಯಾಹ್ನ ಎರಡೂವರೆ ಸುಮಾರಿಗೆ ಲಿಂಗಸುಗೂರು ಸಮೀಪದ ಸರ್ಜಾಪುರ ಬಳಿ ಬರುತ್ತಿದ್ದಾಗ ಖಾಸಗಿ ವಾಹನ ಚಾಲಕ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿದ್ದಾನೆ. ಬಳಿಕ ಮಹಿಳೆ ಜೊತೆಗಿದ್ದ ಮಗುವನ್ನು ಕಸಿದುಕೊಂಡು ಜೋಳದ ಹೊಲದತ್ತ ಓಡಿದ್ದಾನೆ..

lingasuguru
ಬಂಧನ

By

Published : Jan 27, 2021, 7:49 PM IST

ಲಿಂಗಸುಗೂರು (ರಾಯಚೂರು) :ಮಗುವಿನೊಂದಿಗೆ ಆಸ್ಪತ್ರೆಗೆ ಬರುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಖಾಸಗಿ ವಾಹನ ಚಾಲಕ ಶಂಕರ್ ಮುಳಗುಂದ ಎಂಬಾತನ ಮೇಲೆ ಈ ದುಷ್ಕೃತ್ಯವೆಸಗಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಸ್ಥಳೀಯರೇ ಆತನನ್ನು ಹಿಡಿದು ಲಿಂಗಸುಗೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಎರಡೂವರೆ ಸುಮಾರಿಗೆ ಲಿಂಗಸುಗೂರು ಸಮೀಪದ ಸರ್ಜಾಪುರ ಬಳಿ ಬರುತ್ತಿದ್ದಾಗ ಖಾಸಗಿ ವಾಹನ ಚಾಲಕ ಮೂತ್ರ ವಿಸರ್ಜನೆ ನೆಪದಲ್ಲಿ ವಾಹನ ನಿಲ್ಲಿಸಿದ್ದಾನೆ. ಬಳಿಕ ಮಹಿಳೆ ಜೊತೆಗಿದ್ದ ಮಗುವನ್ನು ಕಸಿದುಕೊಂಡು ಜೋಳದ ಹೊಲದತ್ತ ಓಡಿದ್ದಾನೆ.

ಆಗ ಮಗುವನ್ನು ಆತನಿಂದ ಬಿಡಿಸಿಕೊಳ್ಳಲು ತೆರಳಿದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಆಗ ರಸ್ತೆಯಲ್ಲಿ ತೆರಳುತ್ತಿದ್ದ ಜನರು ರಕ್ಷಣೆ ಮಾಡಿದ್ದಾರೆ. ಬಳಿಕ ತಪ್ಪಿಸಿಕೊಂಡು ಬಂದಿದ್ದ ಚಾಲಕನನ್ನು ಜನರು ವಾಹನ ಸಮೇತ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ABOUT THE AUTHOR

...view details