ರಾಯಚೂರು: ಮದುವೆಯಾಗುವುದಾಗಿ ಹೇಳಿ ಯುವತಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ್ದ ಅಪರಾಧಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ 7 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1,02,500 ದಂಡ ವಿಧಿಸಿ ಆದೇಶ ಹೊರಡಿಸಿದೆ.
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಅಪರಾಧಿಗೆ 7 ವರ್ಷ ಜೈಲು, 1ಲಕ್ಷ ರೂ. ದಂಡ - ಅತ್ಯಾಚಾರ ಆರೋಪಿಗೆ ಕಠಿಣ ಶಿಕ್ಷೆ ಲೆಟೆಸ್ಟ್ ನ್ಯೂಸ್
ಮದುವೆಯಾಗುವ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ರಾಯಚೂರು ಜಿಲ್ಲಾ ನ್ಯಾಯಾಲಯವು ಇಂದು ವಿಚಾರಣೆ ನಡೆಸಿ, ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ಅಪರಾಧಿಗೆ 7 ವರ್ಷ ಸಜೆ ನೀಡಿದೆ.
![ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಅಪರಾಧಿಗೆ 7 ವರ್ಷ ಜೈಲು, 1ಲಕ್ಷ ರೂ. ದಂಡ Rape convict got 7 years in prison, 1.02,500 fine](https://etvbharatimages.akamaized.net/etvbharat/prod-images/768-512-5451206-thumbnail-3x2-court.jpg)
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪೊಲೀಸ್ ಠಾಣೆಯ ಬಂಡೆಭಾವಿ ಗ್ರಾಮದ ನಿವಾಸಿ ತಿಮ್ಮಣ್ಣ (22) ಶಿಕ್ಷೆಗೆ ಗುರಿಯಾದ ಅಪರಾಧಿ. ಈತ ಅದೇ ಗ್ರಾಮದ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದರಿಂದ ಆಕೆ ಗರ್ಭಿಣಿಯಾಗಿದ್ದಳು. ಬಳಿಕ ಮದುವೆಗೆ ನಿರಾಕರಿಸಿ ವಂಚಿಸಿದ್ದ.
ಈ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಲಿಂಗಸುಗೂರಿನ ಆರಕ್ಷಕ ವೃತ್ತ ನಿರೀಕ್ಷಕ ವಿ.ಎಸ್.ಹಿರೇಮಠ ತನಿಖೆ ಮಾಡಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಕುರಿತು ಇಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬೈಲೂರು ಶಂಕರ ರಾಮ ಅವರು ಸೂಕ್ತ ಸಾಕ್ಷ್ಯಾಧಾರ ಪರಿಶೀಲಿಸಿ, ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ತಿಮ್ಮಣ್ಣಗೆ 7 ವರ್ಷ ಜೈಲು ಶಿಕ್ಷೆ ಹಾಗೂ 1,02,500 ದಂಡ ವಿಧಿಸಲಾಗಿದೆ. ಇದರಲ್ಲಿ ಒಂದು ಲಕ್ಷ ರೂ. ಹಣವನ್ನು ಸಂತ್ರಸ್ತೆಗೆ ನೀಡಲು ಆದೇಶಿಸಲಾಗಿದೆ.