ರಾಯಚೂರು: ಬೇಲಿಯೇ ಎದ್ದು ಹೊಲ ಮೇಯ್ದಂತಹ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಬಾಲಮಂದಿರದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಅಜಾದ್ ನಗರದಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿನ ಬಾಲಕಿಯರ ಬಾಲಮಂದಿರದಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಬಾಲಮಂದಿರದಲ್ಲಿ 16 ವರ್ಷದ ಬಾಲಕಿಯನ್ನ ಅದೇ ಕಚೇರಿಯಲ್ಲಿ ಪಿವಾನ್ ಆಗಿ ಕೆಲಸ ಮಾಡುತ್ತಿದ್ದ ಸಿದ್ದಯ್ಯ ಎನ್ನುವ ವ್ಯಕ್ತಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.