ರಾಯಚೂರು: ಜಿಲ್ಲೆಯ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಗೆ ವಿದ್ಯುತ್ ಪೂರೈಸುವ ಟ್ರಾನ್ಸ್‌ಫಾರ್ಮರ್ ಕೆಟ್ಟು ಹೋಗಿದ್ದು, ಈಟಿವಿ ಭಾರತ ಈ ಕುರಿತು ವರದಿ ಪ್ರಸಾರ ಮಾಡಿದ ನಂತರ ಅಧಿಕಾರಿಗಳು ಟ್ರಾನ್ಸ್‌ಫಾರ್ಮರ್ ಬದಲಾಯಿಸಿದ್ದಾರೆ.
ವಸತಿ ಶಾಲೆಯ ಟ್ರಾನ್ಸ್‌ಫಾರ್ಮರ್ ಕೊನೆಗೂ ಬದಲಾವಣೆ: ಇದು ಈಟಿವಿ ಭಾರತ ಇಂಪ್ಯಾಕ್ಟ್ - kannadanews
ರಾಯಚೂರು ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗೆ ವಿದ್ಯುತ್ ಪೂರೈಕೆ ಮಾಡುವ ಟ್ರಾನ್ಸ್ಫಾರ್ಮರ್ಅನ್ನು ಜೆಸ್ಕಾಂ ಅಧಿಕಾರಿಗಳು ಕೊನೆಗೂ ಬದಲಾಯಿಸಿದ್ದಾರೆ.
ನಗರದ ಹೊರವಲಯದ ಅಲ್ಪಸಂಖ್ಯಾತ ಇಲಾಖೆಯ ವ್ಯಾಪ್ತಿಗೆ ಬರುವ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕೆಟ್ಟು ಹೋಗಿ ವಾರದಿಂದ ವಿದ್ಯುತ್ ಸರಬರಾಜು ಇಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ರು. ಇದರಿಂದ ಅಲ್ಲಿನ ಮಕ್ಕಳಿಗೆ ಕುಡಿಯುವ ನೀರು ಪೂರೈಕೆ ಕೂಡ ಸಮರ್ಪಕವಾಗಿರಲಿಲ್ಲ ಮತ್ತು ಕತ್ತಲಿನಲ್ಲಿ ವಿದ್ಯಾರ್ಥಿಗಳು ವಾಸಿಸುವಂತಾಗಿತ್ತು. ಮಕ್ಕಳ ಈ ಗೋಳಾಟ ಕೇಳಿದ ಕೆಲ ಪಾಲಕರು ಮಕ್ಕಳನ್ನು ಮನೆಗೆ ವಾಪಾಸ್ ಕರೆದುಕೊಂಡು ಹೋಗುತ್ತಿದ್ದರು.
ಇದರ ಕುರಿತು ಈಟಿವಿ ಭಾರತ "ಸಮಸ್ಯೆ ಸುಳಿಯಲ್ಲಿ ನೂರಾರು ವಿದ್ಯಾರ್ಥಿಗಳು.. ಕೇಳೋರಿಲ್ಲ ಇವರ ಗೋಳು" ಎಂಬ ಶೀರ್ಷಿಕೆಯಡಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಂಕಷ್ಟದ ಕುರಿತು ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಟ್ರಾನ್ಸ್‌ಫಾರ್ಮರ್ ಬದಲಾವಣೆ ಮಾಡಿದ್ದಾರೆ.