ರಾಯಚೂರು: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನುವ ಆರೋಪದ ಮೇರೆಗೆ ಸ್ಥಳೀಯರು ಲಾರಿ ಚಾಲಕನಿಗೆ ಧರ್ಮದೇಟು ಕೊಟ್ಟು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಹೊರವಲಯದ ಯಲಗಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಯುವತಿಯೊಂದಿಗೆ ಅಸಭ್ಯ ವರ್ತನೆ.. ಸ್ಥಳೀಯರಿಂದ ಲಾರಿ ಚಾಲಕನಿಗೆ ಧರ್ಮದೇಟು! - women herrasment news
ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನುವ ಆರೋಪದ ಮೇರೆಗೆ ಸ್ಥಳೀಯರು ಲಾರಿ ಚಾಲಕನಿಗೆ ಧರ್ಮದೇಟು ಕೊಟ್ಟು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಹೊರವಲಯದ ಯಲಗಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯರಿಂದ ಲಾರಿ ಚಾಲಕನಿಗೆ ಧರ್ಮದೇಟು
ಸ್ಥಳೀಯರಿಂದ ಲಾರಿ ಚಾಲಕನಿಗೆ ಧರ್ಮದೇಟು..
ಯಲಗಲದಿನ್ನಿ ಗ್ರಾಮದ ಕಾಲುವೆ ಬಳಿ ಯುವತಿವೋರ್ವಳು ಬಟ್ಟೆ ತೊಳೆಯುವ ವೇಳೆ ಮಹಾರಾಷ್ಟ್ರಕ್ಕೆ ಸೇರಿದ ಲಾರಿ ನಂ. ಎಂ.ಹೆಚ್46, ಹೆಚ್-0555 ಲಾರಿಯ ಚಾಲಕ ಯುವತಿಯ ಜೊತೆ ಅಸಭ್ಯವಾಗಿ ಮಾತನಾಡಿದ್ದಾನೆ ಎನ್ನಲಾಗಿದೆ. ಹಾಗಾಗಿ ಅಲ್ಲೇ ಅಕ್ಕ ಪಕ್ಕದಲ್ಲಿದ್ದ ಸ್ಥಳೀಯ ನಾಗರಿಕರು ಲಾರಿ ಚಾಲಾಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ, ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.