ಕರ್ನಾಟಕ

karnataka

ETV Bharat / state

ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ.. ₹ 6.60 ಲಕ್ಷ ಮೌಲ್ಯದ ಸುಮಾರು 400 ಟ್ರ್ಯಾಕ್ಟರ್‌ನಷ್ಟು ಸ್ಯಾಂಡ್ ಜಪ್ತಿ! - news kannada

ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ‌.

ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ

By

Published : May 4, 2019, 8:44 AM IST

ರಾಯಚೂರು: ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ‌.

ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ

ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಖಾಸಗಿ ಜಮೀನಿನಲ್ಲಿ ಕೃಷ್ಣ‌ ನದಿಯ ಒಡಲು ಕೊರೆದು ಅಂದಾಜು 400 ಟ್ರ್ಯಾಕ್ಟರ್​​ಗಳಲ್ಲಿ ಮರಳನ್ನು ಸಂಗ್ರಹಿಸಿಡಲಾಗಿತ್ತು.

ಖಚಿತ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸುವ ಮೂಲಕ 6.60 ಲಕ್ಷ ರೂ. ಮೌಲ್ಯದ‌ ಮರಳು ಜಪ್ತಿ ಮಾಡಿಕೊಂಡಿದ್ದಾರೆ. ದೇವದುರ್ಗ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ABOUT THE AUTHOR

...view details