ಕರ್ನಾಟಕ

karnataka

ETV Bharat / state

ಸಂತೋಷ್ ಆತ್ಮಹತ್ಯೆ ಯತ್ನದ ತನಿಖೆ ನಡೆಸಲಾಗುತ್ತೆ: ಬೊಮ್ಮಾಯಿ ಸ್ಪಷ್ಟನೆ - Santosh Kumar suicide attempt case updates

ನಿನ್ನೆ ಘಟನೆ ನಡೆದಿದ್ದು ಆಗ ನಾನು ಬೆಂಗಳೂರಿನಲ್ಲಿ ಇರಲಿಲ್ಲ. ಈ ಬಗ್ಗೆ ಮಾಹಿತಿ ಬಂದಿದೆ. ಆತ್ಮಹತ್ಯೆ ಪ್ರಯತ್ನಕ್ಕೆ ಸಂಬಂಧಿಸಿದ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೊಮ್ಮಾಯಿ ಸ್ಪಷ್ಟನೆ
ಬೊಮ್ಮಾಯಿ ಸ್ಪಷ್ಟನೆ

By

Published : Nov 28, 2020, 1:58 PM IST

Updated : Nov 28, 2020, 3:08 PM IST

ರಾಯಚೂರು:ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಕುಮಾರ್ ಆತ್ಮಹತ್ಯೆ ಯತ್ನ ಪ್ರಕರಣವನ್ನ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೊಮ್ಮಾಯಿ ಸ್ಪಷ್ಟನೆ

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಘಟನೆ ನಡೆದಿದ್ದು ಆಗ ನಾನು ಬೆಂಗಳೂರಿನಲ್ಲಿ ಇರಲಿಲ್ಲ. ಈ ಬಗ್ಗೆ ಮಾಹಿತಿ ಬಂದಿದೆ. ಆತ್ಮಹತ್ಯೆ ಪ್ರಯತ್ನಕ್ಕೆ ಸಂಬಂಧಿಸಿದ ತನಿಖೆ ನಡೆಸಲಾಗುವುದು. ಘಟನೆಯ ಕುರಿತಂತೆ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತೋಷ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸಂಜೆಯವರೆಗೆ ವಾರ್ಡ್‌ಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಹೇಳಿದರು.

ಇದನ್ನೂ ಓದಿ:ಸಂತೋಷ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಎಂ ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು

ಸಂತೋಷ್ ಕುಮಾರ್ ಆತ್ಮಹತ್ಯೆ ಯತ್ನಕ್ಕೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಶಿವಕುಮಾರ್ ಬಳಿ ವಿಡಿಯೋಗಳಿದ್ದರೆ ಅವುಗಳನ್ನು ನೀಡಲಿ. ಆ ಬಗ್ಗೆ ತನಿಖೆ ಮಾಡಲಾಗುವುದು. ಮುಂಬರುವ ವರ್ಷದಲ್ಲಿ ಪೊಲೀಸ್ ಠಾಣೆಗಳನ್ನ ಸುಮಾರು 100 ಕೋಟಿ ವೆಚ್ಚದಲ್ಲಿ ಆಧುನಿಕರಣ ಕಾಮಗಾರಿ ಕೈಗೊಳ್ಳಲಾಗುವುದು. ಜತೆಗೆ ವಿಧಿ - ವಿಧಾನ ಪ್ರಯೋಗದಲ್ಲಿ ಸಾಮರ್ಥ್ಯ ಹೆಚ್ಚಿಸುವ ಕ್ರಮ ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಭಾಗದಲ್ಲಿ ಸಹ ಪೊಲೀಸ್ ಠಾಣೆಗಳ ನೆನೆಗುದ್ದಿಗೆ ಬಿದ್ದಿರುವ ಯೋಜನೆಗಳನ್ನ ಸಹ ಪೂರ್ಣಗೊಳಿಸಲು ಸಹ ಸಂಬಂಧಿಸಿದ ಅಧಿಕಾರಗಳೊಂದಿಗೆ ಚರ್ಚಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಸಂತೋಷ್ ವಿಡಿಯೋ ಡಿಕೆಶಿ ಬಳಿ ಇದ್ದರೆ ಬಿಡುಗಡೆ ಮಾಡಲಿ.. ಸಚಿವ ಕೆ ಎಸ್‌ ಈಶ್ವರಪ್ಪ ಸವಾಲು

Last Updated : Nov 28, 2020, 3:08 PM IST

For All Latest Updates

ABOUT THE AUTHOR

...view details