ರಾಯಚೂರು: ಕೊರೊನಾ ಭೀತಿ ಹಿನ್ನೆಲೆ ಬಂದ್ ಮಾಡಿರುವ ಶಾಲೆಗಳನ್ನು ಈಗಲೇ ಆರಂಭಿಸುವುದು ಬೇಡ ಎಂದು ಶ್ರೀ ರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ವಿದ್ಯಾಭ್ಯಾಸ ಎಷ್ಟು ಮುಖ್ಯವೋ ಆರೋಗ್ಯವೂ ಸಹ ಬಹಳ ಮುಖ್ಯ. ಇದೀಗ ಎರಡನೇ ಹಂತದಲ್ಲಿ ಕೊರೊನಾ ಸೋಂಕಿನ ಭೀತಿ ಎದುರಾಗುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಶಾಲೆ ಆರಂಭಿಸಿವುದನ್ನು ಮುಂದೂಡಬೇಕು. ಶಾಲೆಗೆ ಬರುವ ಮಕ್ಕಳು ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಉಪಯೋಗಿಸುವುದು ಕಷ್ಟವಾಗುತ್ತದೆ. ಮಕ್ಕಳು ಆಟವಾಡುವುದು, ಬಹಳಷ್ಟು ಓಡಾಟ ಮಾಡುವುದರಿಂದ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಇನ್ನೂ ಕೆಲ ದಿನಗಳ ಕಾಲ ಮುಂದುಡುವುದು ಸೂಕ್ತ ಎಂದರು.