ರಾಯಚೂರು: ದೇವದುರ್ಗದ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಅವರು ಸಿಎಂ ಕುಮಾರಸ್ವಾಮಿ ವಾಸ್ತವ್ಯ ಹೂಡಿರುವ ಕರೆಗುಡ್ಡ ಗ್ರಾಮದವರೆಗೆ ಪಾದಯಾತ್ರೆ ಕೈಗೊಂಡಿರುವ ಹಿನ್ನೆಲೆ ಬಲ್ಲಟಗಿ ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಶಾಸಕ ಶಿವನಗೌಡ ನಾಯಕ್ ಪಾದಯಾತ್ರೆ... ಬಲ್ಲಟಗಿಯಲ್ಲಿ ಬಿಗಿ ಬಂದೋಬಸ್ತ್ - undefined
ಶಾಸಕ ಶಿವನಗೌಡ ನಾಯಕ್ ಪಾದಯಾತ್ರೆ ಹಿನ್ನೆಲೆ ಬ್ಯಾಗವಾಟ್ ಗ್ರಾಮದಲ್ಲಿ ಕಾರ್ಯಕರ್ತರ ದಂಡು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ನಿಷೇಧಾಜ್ಞೆ ಜಾರಿ
ಬ್ಯಾಗವಾಟ್ ಗ್ರಾಮದಲ್ಲಿ ಕಾರ್ಯಕರ್ತರ ದಂಡು ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಲ್ಲಟಗಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಶಾಲೆ ಆವರಣದಿಂದ ಬಿಜೆಪಿ ಕಾರ್ಯಕರ್ತರು ಹೊರಗೆ ಹೋಗದಂತೆ ಪೊಲೀಸರು ತಡೆಹಿಡಿದಿದ್ದಾರೆ.
ಬಲ್ಲಟಗಿ ಗ್ರಾಮದಲ್ಲಿ ಪೊಲೀಸ್ ಕಾವಲು
ಶಾಸಕರ ಪಾದಯಾತ್ರೆಗೆ ಅಡ್ಡಿಪಡಿಸುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿ ಮಾಡಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.
Last Updated : Jun 26, 2019, 1:37 PM IST