ರಾಯಚೂರು: ಬಡವರಿಗೆ ವಿತರಣೆ ಮಾಡುವ ಪಡಿತರ ಅಕ್ಕಿಯನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ವಶ - Raichuru news
ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಲಾರಿಯಲ್ಲಿ 80ಕ್ಕೂ ಹೆಚ್ಚು ಕ್ವಿಂಟಾಲ್ ಅಕ್ಕಿಯನ್ನು ಸಾಗಣೆ ಮಾಡಲಾಗುತ್ತಿತ್ತು.
ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ವಶ
ಸಹಾಯಕ ಆಯುಕ್ತ ಸಂತೋಷ ಕಾಮಗೌಡ ದಾಳಿ ನಡೆಸಿ ಅಕ್ರಮಕ್ಕೆ ಕಡಿವಾಣ ಹಾಕಿದ್ದಾರೆ. ಇನ್ನು ವಾಹನದಲ್ಲಿದ್ದ ಸುಮಾರು 80 ಕ್ವಿಂಟಾಲ್ ಅಕ್ಕಿಯನ್ನ ವಶಕ್ಕೆ ಪಡೆಯಲಾಗಿದೆ. ಮಾನ್ವಿ ತಾಲೂಕಿನ ಕಪಗಲ್ ಗ್ರಾಮಕ್ಕೆ ಈ ವಾಹನ ಹೋಗುತ್ತಿತ್ತು ಎನ್ನಲಾಗಿದೆ.
ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.