ರಾಯಚೂರು: ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಸಂಘಟನೆ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಿ: ಎಸ್‌ಎಫ್‌ಐ ಒತ್ತಾಯ
ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಆನ್ಲೈನ್ ಶಿಕ್ಷಣವನ್ನು ನಿಲ್ಲಿಸಬೇಕು. ವಿದ್ಯಾರ್ಥಿಗಳು, ಪ್ರಾಧ್ಯಾಪಕರ ಆರೋಗ್ಯದ ಹಿತದೃಷ್ಟಿಯಿಂದ ಯುಜಿ, ಪಿಜಿ, ಡಿಪ್ಲೊಮಾ, ಇಂಜಿನಿಯರಿಂಗ್, ಎಲ್‌ಎಲ್‌ಬಿ ಪರೀಕ್ಷೆಗಳನ್ನ ರದ್ದುಪಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಎಸ್‌ಎಫ್‌ಐ ಸಂಘಟನೆಯಿಂದ ಒತ್ತಾಯ
ಸರ್ಕಾರ ಆರು ತಿಂಗಳ ಎಲ್ಲಾ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು. ಶಿಕ್ಷಣ ಸಂಸ್ಥೆಗಳು, ವಿದ್ಯಾಲಯಗಳಲ್ಲಿ ಅತಿಥಿ ಶಿಕ್ಷಕರು, ಉಪನ್ಯಾಸಕರು, ಎಲ್ಲಾ ಕಾರ್ಮಿಕರ ಬಾಕಿ ವೇತನ ಖಾತರಿ ಪಡಿಸಿ ವೇತನ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.