ಕರ್ನಾಟಕ

karnataka

ETV Bharat / state

ಅಸಂಘಟಿತ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಯಾವುದೇ ಯೋಜನೆ ಜಾರಿಗೆ ತಂದಿಲ್ಲ: ಶಾಂತವೀರ ನಾಯಕ್​​ - ಶಾಂತವೀರ ನಾಯಕ್

ಅಸಂಘಟಿತ ಕಾರ್ಮಿಕರಿಗೆ, ರೈತರಿಗೆ ಯಾವ ಒಂದು ಯೋಜನೆಯನ್ನು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜಾರಿಗೆ ತಂದಿಲ್ಲ ಎಂದು ಶಾಂತವೀರ ನಾಯಕ್ ಆರೋಪಿಸಿದರು.

ಶಾಂತವೀರ ನಾಯಕ್

By

Published : Mar 16, 2019, 6:01 PM IST

ರಾಯಚೂರು: ಐದು ವರ್ಷಗಳಲ್ಲಿ ಬಹುಸಂಖ್ಯಾತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಕೇಂದ್ರ ಸರ್ಕಾರ ಯಾವುದೇ ಯೋಜನೆ ಜಾರಿಗೆ ತಂದಿಲ್ಲ ಎಂದು ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಸಮಿತಿಯ ರಾಜ್ಯಾಧ್ಯಕ್ಷ ಶಾಂತವೀರ ನಾಯಕ್ ಆರೋಪಿಸಿದ್ದಾರೆ.

ಶಾಂತವೀರ ನಾಯಕ್

ರಾಯಚೂರಿನ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರಿಗೆ, ರೈತರಿಗೆ ಯಾವ ಒಂದು ಯೋಜನೆಯನ್ನು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಜಾರಿಗೆ ತಂದಿಲ್ಲ. ಕಾರ್ಮಿಕರ ಕಲ್ಯಾಣಕ್ಕಾಗಿ ಯಾವ ಕೆಲಸ ಮಾಡಿಲ್ಲ. ಬದಲಾಗಿ ಜಿಎಸ್​ಟಿ, ನೋಟ್ ಬ್ಯಾನ್ ಮಾಡುವ ಮೂಲಕ ಸಣ್ಣ ಉದ್ಯಮಿಗಳಿಗೆ ಹೊಡೆತ ಬಿದ್ದಿದೆ. ಅಸಂಘಟಿತ ಕಾರ್ಮಿಕರು ಬೀದಿಪಾಲಾಗುವಂತೆ ಮಾಡಿದೆ ಎಂದರು.

ಸದ್ಯ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರ ಬೀದಿ ಬದಿ ವ್ಯಾಪಾರಿಕ್ಕೆ ಬಡವರ ಬಂಧು ಯೋಜನೆ ಜಾರಿಗೆ ತಂದಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿ ಒತ್ತಾಯಿಸಿರುವುದು ಎಂದರು. ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕು ಎಂದರು.

ABOUT THE AUTHOR

...view details