ಕರ್ನಾಟಕ

karnataka

ETV Bharat / state

ಕ.ಸಾ.ಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವೆ: ಶೇಖರಗೌಡ ಮಾಲೀಪಾಟೀಲ್ - kannada sahitya parishat

ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ 2021ರ ಮೇ.9 ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ನಾನು ಕೂಡ ಸ್ಪರ್ಧಿಸಲಿದ್ದೇನೆ ಎಂದು ಶೇಖರಗೌಡ ಮಾಲೀಪಾಟೀಲ್ ತಿಳಿಸಿದರು.

shekharagowda malipatil
ಶೇಖರಗೌಡ ಮಾಲೀಪಾಟೀಲ್

By

Published : Mar 5, 2021, 3:08 PM IST

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ 2021ರ ಮೇ 9ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ ಎಂದು ಶೇಖರಗೌಡ ಮಾಲೀಪಾಟೀಲ್ ತಿಳಿಸಿದರು.

ಶೇಖರಗೌಡ ಮಾಲೀಪಾಟೀಲ್

ರಾಯಚೂರಿನ ಪತ್ರಿಕಾ‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡಿಗರ ಪ್ರಾತಿನಿಧಿಕ ಹಾಗು ಮಾತೃ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ 3.5 ಲಕ್ಷ ಸದಸ್ಯರನ್ನು ಹೊಂದಿದೆ. ರಾಜ್ಯಾದ್ಯಂತ 3.10 ಲಕ್ಷ ಮತದಾರರು ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ. ಚುನಾವಣೆಯಲ್ಲಿ ನಾನು ಕೂಡ ಸ್ಪರ್ಧಿಸಲಿದ್ದೇನೆ ಎಂದರು.

ಇದನ್ನೂ ಓದಿ:ಈ ಬಾರಿ ಕಸಾಪ ಚುನಾವಣೆ ಅಖಂಡ ಬಳ್ಳಾರಿ ಜಿಲ್ಲೆ ಒಳಗೊಂಡಂತೆ ನಡೆಯುತ್ತೆ: ಸಿರಿಗೇರಿ ಯರಿಸ್ವಾಮಿ

ಹಲವು ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದೇನೆ. ಗಂಗಾವತಿಯಲ್ಲಿ ನಡೆದ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದ ಅವಧಿಯಲ್ಲಿ, ಜಿಲ್ಲಾಧ್ಯಕ್ಷನಾಗಿದ್ದಾಗ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಹೀಗಾಗಿ ಕನ್ನಡ ನಾಡಿನಲ್ಲಿ ಸಾಹಿತ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು‌ ಹಲವು ಯೋಜನೆ ರೂಪಿಸಿಕೊಂಡಿದ್ದು, ಮುಂಬರುವ ಕಸಾಪ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಕೋರಿದ್ದಾರೆ.

ABOUT THE AUTHOR

...view details