ರಾಯಚೂರು:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕೂಡ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ರಾಯರ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಜನತೆಗೆ ಕರೆ ಕೊಟ್ಟಿದ್ದಾರೆ.
ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಜೆೊತೆಜೊತೆಗೆ ನಡೆಯುತ್ತಿದೆ. ಈ ವೇಳೆ ಮಂತ್ರಾಲಯದ ಎಂಪಿಪಿ ಎಲಿಮೆಂಟ್ರಿ ಶಾಲೆಯ ಬೂತ್ ಸಂಖ್ಯೆ-67ರಲ್ಲಿ ಶ್ರೀ ಸುಭುದೇಂದ್ರ ತೀರ್ಥರು ಮತದಾನ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಂವಿಧಾನಬದ್ಧವಾಗಿ ಪ್ರತಿಯೊಬ್ಬರಿಗೆ ನೀಡಿರುವ ಮತದಾನ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದರು.