ಕರ್ನಾಟಕ

karnataka

ETV Bharat / state

ಬಿಜೆಪಿ ಎಂದರೆ ಭ್ರಷ್ಟಾಚಾರ ಜನತಾ ಪಾರ್ಟಿ: ಸಿದ್ದರಾಮಯ್ಯ - Siddaramaiah statement against BJP

ಸಿಎಂ ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದೆ. ಬಿಜೆಪಿ ಎಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ಬಿಜೆಪಿಯ ಭ್ರಷ್ಟಾಚಾರವನ್ನು ಅವರ ಪಕ್ಷದ ನಾಯಕರೇ ಬಯಲಿಗೆಳೆಯುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಕೇಸರಿ ಪಾಳಯದ ವಿರುದ್ಧ ಗುಡುಗಿದ ವಿಪಕ್ಷ ನಾಯಕ
ಕೇಸರಿ ಪಾಳಯದ ವಿರುದ್ಧ ಗುಡುಗಿದ ವಿಪಕ್ಷ ನಾಯಕ

By

Published : Apr 11, 2021, 5:30 PM IST

ರಾಯಚೂರು:ಯಡಿಯೂರಪ್ಪ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮೊದಲಿನಿಂದಲೂ ಸುಳ್ಳು ಹೇಳಿಕೊಂಡೇ ರಾಜಕಾರಣ ಮಾಡಿರುವ ಬಿಎಸ್‌ವೈ ಇದರ ಪ್ರತಿಫಲವನ್ನು ಉಣ್ಣಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್​ವೈ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ

ಸಿಎಂ ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದೆ. ಅವರು ಆದಷ್ಟು ಬೇಗ ಮನೆಗೆ ಹೋಗುತ್ತಾರೆ ಎಂದು ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿ ಭ್ರಷ್ಟ ಪಕ್ಷ ಎನ್ನಲು ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಲೇವಡಿ ಮಾಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ರಾಜಕೀಯ ಪಕ್ಷವೊಂದರ ಹಣೆಬರಹವನ್ನು ಜನರು ನಿರ್ಧರಿಸುತ್ತಾರೆ. ಕಾಂಗ್ರೆಸ್ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ನಾಶವಾಗುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಾಲಿಶತನದಿಂದ ಕೂಡಿದೆ. ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ಚೆನ್ನಾಗಿ ಬಲ್ಲ ದೇಶದ ಜನತೆ ಈ ಪಕ್ಷವನ್ನು ಎಂದಿಗೂ ಕೈ ಬಿಡುವುದಿಲ್ಲ ಎಂದಿದ್ದಾರೆ.

ABOUT THE AUTHOR

...view details