ರಾಯಚೂರು: ಜಿಲ್ಲೆಯ ಸಿಂಧನೂರು ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಸಿಂಧನೂರು ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ - raichur latest news
ಸಿಂಧನೂರು ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ನ ಇಬ್ಬರು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇಂದು ನಡೆದ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಮಾಲೀಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಮುರ್ತುಜಾ ಸಾಬ್ ಅವರನ್ನು ಆಯ್ಕೆ ಮಾಡಲಾಗಿದೆ. ಒಟ್ಟು 31 ಸದಸ್ಯರನ್ನು ಹೊಂದಿರುವ ನಗರಸಭೆಯಲ್ಲಿ ಕಾಂಗ್ರೆಸ್ನ 20 ಹಾಗೂ ಜೆಡಿಎಸ್ನ 11 ಸದಸ್ಯರು ಹಾಜರಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಆಯ್ಕೆಗೆ 17 ಬಹುಮತದ ಅವಶ್ಯಕತೆಯಿತ್ತು. ಕಾಂಗ್ರೆಸ್ಗೆ ಬಹುಮತ ಬಂದ ಹಿನ್ನೆಲೆ, ಮೀಸಲಾತಿಯಂತೆ ಕಾಂಗ್ರೆಸ್ ಸುಲಭವಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಇನ್ನೂ ನಿಗದಿಯಾದ ಸಮಯದಂತೆ ಚುನಾವಣಾ ಪ್ರಕ್ರಿಯೆ ಆರಂಭಿಸಿದಾಗ, ಕಾಂಗ್ರೆಸ್ನ ಇಬ್ಬರು ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರು ನಾಮಪತ್ರ ಸಲ್ಲಿಸಿದ ಕಾರಣ, ಲಿಂಗಸುಗೂರು ಸಹಾಯಕ ಆಯುಕ್ತ ರಾಜಶೇಖರ ಡಂಬಳ ಅಧಿಕೃತವಾಗಿ ಘೋಷಣೆ ಮಾಡಿದರು.