ರಾಯಚೂರು:ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸುವ ಮೂಲಕ ಸಿಂಧನೂರು ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಸಭೆ ನಡೆಸಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ನಾಡಗೌಡ? - ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ
ವಿಧಾನ ಪರಿಷತ್‌ನ ಶಿಕ್ಷಕರ ಕ್ಷೇತ್ರಕ್ಕೆ ನಾಳೆ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದ್ದು, ನಿನ್ನೆ ಸಂಜೆಯ ವೇಳೆಗೆ ಬಹಿರಂಗ ಸಭೆ ನಡೆಸುವ ಅವಧಿ ಮುಗಿದಿದೆ..

ಸಭೆ ನಡೆಸಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ನಾಡಗೌಡ..?
ಸಭೆ ನಡೆಸಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದರೇ ಶಾಸಕ ನಾಡಗೌಡ?
ನಾಳೆ ವಿಧಾನಪರಿಷತ್ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಹೀಗಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದರ ನಡುವೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಖಾಸಗಿ ಶಾಲೆಯ ಶಿಕ್ಷಕರ ಸಂಘದ ಪ್ರತಿನಿಧಿಗಳು ಹಾಗೂ ಶಿಕ್ಷಕರ ಜೊತೆ ಸಭೆ ನಡೆಸುವ ಮೂಲಕ ಜೆಡಿಎಸ್ ಅಭ್ಯರ್ಥಿ ಪರವಾಗಿ ಶಾಸಕ ನಾಡಗೌಡ ಮತಯಾಚನೆ ಮಾಡಿದ್ದಾರೆ ಎನ್ನಲಾಗಿದೆ.