ರಾಯಚೂರು:ನಾವು ಕಳ್ಳರು, ನೀವೂ ಕಳ್ಳರು. ದುಡ್ಡು ಕೊಟ್ಟರೆ ಮಾತ್ರ ಕೆಲಸ ಆಗೋದು. ಹೀಗಂತ ಜವಾಬ್ದಾರಿಯುತ ಸ್ಥಾನದಲ್ಲಿರುವ ಜಿಲ್ಲೆಯ ಸಿಂಧನೂರು ತಾಲೂಕಿನ ಸಬ್ ರಿಜಿಸ್ಟ್ರಾರ್ ಲಕ್ಷ್ಮಿ ತುಳಸಿ ಬಹಿರಂಗವಾಗಿ ಲಂಚ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ವಕೀಲ ಸಂತೋಷ್ ಪಾಟೀಲ್ ಎಂಬುವವರು ಮನೆ ಕಟ್ಟುವುದಕ್ಕಾಗಿ ಸಾಲ ಪಡೆಯಲು ಬ್ಯಾಂಕ್ಗೆ ತೆರಳಿದ್ದ ವೇಳೆ ಬ್ಯಾಂಕ್ ಸಿಬ್ಬಂದಿ ದಾಖಲೆಗಳನ್ನು ಸಬ್ ರಿಜಿಸ್ಟ್ರಾರ್ ಆಫೀಸ್‌ನಲ್ಲಿ ಮಾರ್ಟ್‌ಗೇಜ್ ಮಾಡಿಸಲು ಸೂಚಿಸಿದ್ದರು. ಹೀಗಾಗಿ, ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿದ್ದ ವೇಳೆ ಸಬ್ ರಿಜಿಸ್ಟ್ರಾರ್ ಲಕ್ಷ್ಮಿ ತುಳಸಿ, ಮಾರ್ಟ್‌ಗೇಜ್ ಮಾಡಲು 2,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.