ರಾಯಚೂರು: ಮನೆಯ ಮುಂದೆ ಪಟಾಕಿ ಸಿಡಿಸಿ, ಪೆಟ್ರೋಲ್ ಬಾಂಬ್ ಹಾಕುವುದಾಗಿ ಬೆದರಿಸಿ ಲಕ್ಷಾಂತರ ರೂಪಾಯಿ ನೀಡುವಂತೆ ಧಮ್ಕಿ ಹಾಕಿರುವ ಪ್ರಕರಣ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು: ಹಣ ಕೊಡದಿದ್ರೆ ಪೆಟ್ರೋಲ್ ಬಾಂಬ್ ಹಾಕುವುದಾಗಿ ಬೆದರಿಕೆ! - Siravara in Raichur district
ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ದುಷ್ಕರ್ಮಿಗಳು ಹಣ ನೀಡದಿದ್ದರೆ ಪೆಟ್ರೋಲ್ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪೆಟ್ರೋಲ್ ಬಾಂಬ್ ಹಾಕುವುದಾಗಿ ಬೆದರಿಕೆ ಎಸ್ಎಂಎಸ್!
ಪಟ್ಟಣದ ಶ್ರೀಬಸವೇಶ್ವರ ವೃತ್ತದ ಬಳಿ ಇರುವ ವ್ಯಾಪಾರಿ ಅಚ್ಚಾ ಅಮರೇಶಪ್ಪ ಎನ್ನುವವರ ಮನೆ ಮುಂದೆ ರಾತ್ರಿ ಪಟಾಕಿ ಸಿಡಿಸಿ ಬೆಂಕಿ ಹಚ್ಚಿದ್ದಾರೆ. ಸುಮಾರು 10 ಲಕ್ಷ ರೂಪಾಯಿ ನೀಡಬೇಕು. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರಲ್ಲ. ಪೆಟ್ರೋಲ್ ಬಾಂಬ್ ಹಾಕುವುದಾಗಿ ಎಸ್ಎಂಎಸ್ ರವಾನಿಸಿದ್ದಾರೆ.
ಘಟನೆಯಿಂದ ಕುಟುಂಬದವರು ಭಯಭೀತರಾಗಿದ್ದು, ಘಟನೆ ಕುರಿತಂತೆ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.