ರಾಯಚೂರು: ರಸ್ತೆ ದಾಟುವ ವೇಳೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
ರಸ್ತೆ ದಾಟುವಾಗ ವಾಹನ ಡಿಕ್ಕಿ ; ಬಾಲಕ ಸ್ಥಳದಲ್ಲೇ ಸಾವು - ಮಾನ್ವಿ ಬಾಲಕ ಸಾವು ಸುದ್ದಿ
ಟಾಟಾ ಏಸ್ ಚಾಲಕನ ನಿರ್ಲಕ್ಷ್ಯ ಚಾಲನೆಗೆ ಬಾಲಕನೋರ್ವ ಬಲಿಯಾಗಿರುವ ಘಟನೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
![ರಸ್ತೆ ದಾಟುವಾಗ ವಾಹನ ಡಿಕ್ಕಿ ; ಬಾಲಕ ಸ್ಥಳದಲ್ಲೇ ಸಾವು road accident](https://etvbharatimages.akamaized.net/etvbharat/prod-images/768-512-8871833-thumbnail-3x2-rcr.jpg)
road accident
ಮೃತ ಬಾಲಕನನ್ನು ಕೃಷ್ಣ ತಂದೆ ವೀರೇಶ (8) ಎಂದು ಗುರುತಿಸಲಾಗಿದೆ. ಚಾಲಕನ ನಿರ್ಲಕ್ಷ್ಯ ತನದಿಂದ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ.
Last Updated : Sep 20, 2020, 6:48 PM IST