ರಾಯಚೂರು: ಅತಿ ಹೆಚ್ಚು ಭಕ್ತರು ಆಗಮಿಸುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಕಾಣಿಕೆ ಹುಂಡಿಯಲ್ಲಿ ಕೋಟ್ಯಂತರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಕಳೆದ 34 ದಿನಗಳಿಂದ ಸಂಗ್ರಹವಾಗಿರುವ ಕಾಣಿಕೆಯನ್ನು ಬುಧವಾರ ಬೆಳಗ್ಗೆ 7 ಗಂಟೆಯಿಂದ ಎಣಿಕೆ ಮಾಡಲಾಗಿದೆ. ನೂರಾರು ಸಂಖ್ಯೆಯಲ್ಲಿ ಶ್ರೀಮಠದ ಭಕ್ತರು, ಸ್ವಯಂ ಸೇವೆಕರು ಮತ್ತು ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಒಟ್ಟು 3,30,20,636 ರೂಪಾಯಿ ಸಂಗ್ರಹವಾಗಿದ್ದು, ಶ್ರೀಮಠದ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗಿದೆ ಎಂದು ಶ್ರೀಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿ ಎಣಿಕೆ.. ಕೋಟ್ಯಂತರ ರೂಪಾಯಿ ಕಾಣಿಕೆ ಸಂಗ್ರಹ
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಾಣಿಕೆ ಹುಂಡಿ ಎಣಿಕೆ - ಕೋಟ್ಯಂತರ ರೂಪಾಯಿ ಸಂಗ್ರಹ- ಎಣಿಕೆ ಕಾರ್ಯದಲ್ಲಿ ನೂರಾರು ಜನರು ಭಾಗಿ
ಹುಂಡಿ ಎಣಿಕೆ
ಇನ್ನೂ ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ದೇಶ, ವಿದೇಶ, ಅಂತರರಾಜ್ಯ ಹಾಗೂ ರಾಜ್ಯ ಸೇರಿದಂತೆ ನಾನಾ ಭಾಗಗಳಿಂದ ಭಕ್ತರು ಆಗಮಿಸಿದ್ದಾರೆ. ಈ ವೇಳೆ ಭಕ್ತರು ಕಾಣಿಕೆಯನ್ನು ಹುಂಡಿಯಲ್ಲಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಮುಂದುವರೆದ ರೆಡ್ಡಿ ಟೆಂಪಲ್ ರನ್.. ಗಂಗಾವತಿ ದುರ್ಗಮ್ಮ ದೇವಿಗೆ ವಿಶೇಷ ಪೂಜೆ