ರಾಯಚೂರು: ಕಲಿಯುಗದ ಕಾಮಧೇನು ಮಂತ್ರಾಲಯದ ಗುರು ಶ್ರೀರಾಘವೇಂದ್ರ ಸ್ವಾಮೀಜಿಯವರ 379ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದಿನಿಂದ ಸಪ್ತ ರಥೋತ್ಸವ ಆರಂಭವಾಗಲಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಸಪ್ತ ರಥೋತ್ಸವವನ್ನ ಸರಳವಾಗಿ ನೇರವೇರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ಪೂಜಾ ಕೈಂಕರ್ಯಗಳು ನೆರವೇರಲಿವೆ. ಈ ಮಹೋತ್ಸವದಲ್ಲಿ ಶ್ರೀಮಠದ ಸಿಬ್ಬಂದಿ, ಅಧಿಕಾರಿಗಳು ಹೊರತುಪಡಿಸಿ ಉಳಿದ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.