ರಾಯಚೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾ ಬೇಧಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಡ್ರಗ್ಸ್ ಜಾಲ ಬೇಧಿಸಬೇಕು: ಶ್ರೀರಾಮ ಸೇನೆ ಆಗ್ರಹ
ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಮುಖ್ಯಂತ್ರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ, ಸ್ಥಾನಿಕ ಅಧಿಕಾರಿ ಮೂಲಕ ಮುಖ್ಯಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಡ್ರಗ್ಸ್ ಜಾಲ ವ್ಯಾಪಕವಾಗಿ ಹರಡಿದ್ದು, ಇಂದು ಸಿನಿ ನಟರ ಮೂಲಕ ಹೊರ ಬಿದ್ದಿದೆ. ಡ್ರಗ್ಸ್ ಜಾಲಕ್ಕೆ ಯುವ ಸಮುದಾಯ ಬಲಿಯಾಗುತ್ತಿದ್ದು, ಈ ಮಾಫಿಯಾ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಚಿತ್ರರಂಗದಲ್ಲಿ ಡ್ರಗ್ಸ್ ಜಾಲದ ಬಗ್ಗೆ ತನಿಖೆ ನಡೆಸಬೇಕು. ಡ್ರಗ್ಸ್ ಮಾರಟ ಹಾಗೂ ಸಾಗಾಟದಾರರ ವಿರುದ್ಧ ರಾಷ್ಟ್ರೀಯ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಬಂಧಿಸಬೇಕು. ಶಾಲಾ-ಕಾಲೇಜು ಆವರಣಗಳ ಗುಪ್ತಚರ ಇಲಾಖೆಯ ಗಸ್ತು ಹೆಚ್ಚಿಸಬೇಕು. ಕಳೆದ 7 ವರ್ಷಗಳ ಹಿಂದೆ ರಾಜ್ಯದಲ್ಲಿ ಡ್ರಗ್ಸ್ ಜಾಲ ಕುರಿತು ನಮ್ಮ ಸಂಘಟನೆ ಧ್ವನಿ ಎತ್ತಿದ್ದು, ಇದರ ಹಿಂದೆ ಯಾರೇ ಇದ್ದರೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.