ಕರ್ನಾಟಕ

karnataka

ETV Bharat / state

ರಾಯಚೂರು: ಟ್ರ್ಯಾಕ್ಟರ್ ಮೇಲಿಂದ ಬಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಸಾವು - ಟ್ರ್ಯಾಕ್ಟರ್ ಮೇಲಿಂದ ಬಿದ್ದು ಬಾಲಕ ಸಾವು

ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಹೊರವಲಯದಲ್ಲಿ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಟ್ರ್ಯಾಕ್ಟರ್ ಮೇಲಿಂದ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು
SSLC Student died by fall down from Tractor at Raichur

By

Published : Jan 13, 2021, 5:38 PM IST

ರಾಯಚೂರು : ಟ್ರ್ಯಾಕ್ಟರ್ ಮೇಲಿಂದ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಾಲೂಕಿನ ತಲಮಾರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಪಂಚೇಂದ್ರ (16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಇಂದು ಎಂದಿನಂತೆ ಈತ ಶಾಲೆ ಮುಗಿಸಿಕೊಂಡು ತನ್ನ ಸ್ನೇಹಿತರೊಂದಿಗೆ ಮನೆ ಕಡೆ ಹೋಗುತ್ತಿದ್ದನು. ಈ ವೇಳೆ ದಾರಿಯಲ್ಲಿ ತನ್ನ ಗ್ರಾಮಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್​​​ ನಿಲ್ಲಿಸಿ ಅದರಲ್ಲಿ ಹೋಗುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್​ ಟ್ರಾಲಿ ಜಂಪ್​ ಆಗಿ ಬಾಲಕ ಕೆಳಗಡೆ ಬಿದ್ದಿದ್ದಾನೆ. ಇದೇ ವೇಳೆ ಟ್ರಾಲಿ ವಿದ್ಯಾರ್ಥಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಓದಿ: ಅಮ್ಮನ ಸಾವಿನಿಂದ 3 ವರ್ಷ ಕೊರಗಿದ ಮಗ: ದುಃಖ ತಾಳಲಾರದೇ ನೇಣಿಗೆ ಶರಣು

ಘಟನಾ ಸ್ಥಳಕ್ಕೆ ಇಡಪನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಟ್ರಾಕ್ಟರ್ ಹಾಗೂ ಟ್ರಾಲಿಯನ್ನು ಜಪ್ತಿ ಮಾಡಿಕೊಂಡಿದ್ದಾರೆ.

ABOUT THE AUTHOR

...view details