ರಾಯಚೂರು:ಜಿಲ್ಲೆಯಲ್ಲಿ ಪೊಲೀಸರು ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರ ಮನೆ ಹಾಗೂ ಕಚೇರಿ ದಾಳಿ ನಡೆಸಿದ್ದಾರೆ. ದಾಳಿ ಭಾಗವಾಗಿ ಪಿಎಫ್ಐ ಮಾಜಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಪಿಎಫ್‌ಐ ಸಂಘಟನೆ ಮಾಜಿ ಅಧ್ಯಕ್ಷ ಮಹಮದ್ ಇಸ್ಮಾಯಿಲ್ ಹಾಗೂ ಕಾರ್ಯದರ್ಶಿ ಆಸೀಂ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ರಾಯಚೂರು ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ನೇತೃತ್ವದ ತಂಡದಿಂದ ದಾಳಿ ನಡೆದಿದ್ದು, ಪಿಎಫ್ಐ ಕಾರ್ಯಕರ್ತರನ್ನು ನಗರದ ತಹಶೀಲ್ದಾರ್ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.