ರಾಯಚೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ರಾಜ್ಯ ಸರ್ಕಾರ ಕೂಡಲೇ ಅಂಗೀಕರಿಸಬೇಕೆಂದು ಆಗ್ರಹಿಸಿ ಸೆ .25 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಹೋರಾಟ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಅಂಬಣ್ಣ ಅರೋಲಿಕರ ಹೇಳಿದರು.
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಸೆ. 5 ರಂದು ರಾಜ್ಯಾದ್ಯಂತ ಪ್ರತಿಭಟನೆ - ಸರ್ವೋಚ್ಛ ನ್ಯಾಯಾಲಯ ನೀಡಿರುವ ತೀರ್ಪು
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ರಾಜ್ಯ ಸರ್ಕಾರ ಕೂಡಲೆ ಅಂಗೀಕರಿಸಲು ಆಗ್ರಹಿಸಿ ಸೆ. 25 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆ
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಲು ಸೆ .21 ರಿಂದ 31 ರವರೆಗೆ ನಡೆಯುವ ಅಧಿವೇಶನದಲ್ಲಿ ರಾಜ್ಯದ ಎಲ್ಲ ಶಾಸಕರು ಪಕ್ಷಾತೀತವಾಗಿ ವರದಿ ಜಾರಿಗೊಳಿಸಲು ಒತ್ತಾಯಿಸಬೇಕು ಎಂದರು. ಈ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಅಸ್ಪೃಶ್ಯ ಸಮುದಾಯದ ಮುಖಂಡರುಗಳು ಮುಕ್ತವಾಗಿ ಚರ್ಚಿಸಿ ಸೆ. 25 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ.ಪಿ. ಅನಿಲ್ ಕುಮಾರ್, ಜಿ. ಅಬ್ರಾಹಂ ಹೊನ್ನಟಗಿ, ಹೇಮರಾಜ ಅಸ್ಕಿಹಾಳ, ರಾಘವೇಂದ್ರ ಬೋರೆಡ್ಡಿ, ಜನಾರ್ಧನ್ ಉಪಸ್ಥಿತರಿದ್ದರು.