ಕರ್ನಾಟಕ

karnataka

ETV Bharat / state

ವಿದ್ಯಾರ್ಥಿನಿ ಸಾವು ಪ್ರಕರಣ... ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥೈರ್ಯನಿಧಿ ಯೋಜನೆಯಡಿ 1 ಲಕ್ಷ ಪರಿಹಾರ ನೀಡಬಹುದಾಗಿದ್ದು, ಈ ಹಿನ್ನೆಲೆಯಲ್ಲಿ ಈಗ ಭೇಟಿ ನೀಡಿ ಮಾಹಿತಿ ಪಡೆಯಲಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ

By

Published : Apr 26, 2019, 9:13 PM IST

ರಾಯಚೂರು: ನಗರದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿನಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಯ ತಂದೆ-ತಾಯಿ ಹಾಗೂ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಅಗತ್ಯ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಇಲಾಖೆಯ ಡಿಡಿ ಸುಂದರ್ ಪೂಜಾರಿ, ವಿದ್ಯಾರ್ಥಿನಿ ಕೊಲೆ ಪ್ರಕರಣದ ಅಗತ್ಯ ಮಾಹಿತಿ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥೈರ್ಯನಿಧಿ ಯೋಜನೆಯಡಿ 1 ಲಕ್ಷ ಪರಿಹಾರ ನೀಡಬಹುದಾಗಿದ್ದು, ಈ ಹಿನ್ನೆಲೆಯಲ್ಲಿ ಈಗ ಭೇಟಿ ನೀಡಿ ಮಾಹಿತಿ ಪಡೆಯಲಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಿದ್ದ ಕಾರಣ ಇಷ್ಟು ದಿನ ಕಾಯಬೇಕಾಯಿತು ಎಂದರು. ಈ ಸಂದರ್ಭದಲ್ಲಿ ಸಿಡಿಪಿಒ ವೀರನ್ ಗೌಡ, ರಾಜ್ಯ ಸಂಪನ್ಮೂಲ ಕೇಂದ್ರದ ಮಹಿಳಾ ಅಭಿವೃದ್ಧಿ ನಿಗಮ ಪದ್ಮಾ ಉಪಸ್ಥಿತರಿದ್ದರು.

ABOUT THE AUTHOR

...view details