ರಾಯಚೂರು:ಸಿರವಾರ ತಾಲೂಕಿನ ಮಲ್ಲಟ ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಿಲ್ಲಿದೇ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಮಾನ್ವಿ ಶಾಸಕ ರಾಜಾ ವೆಂಕಟಪ್ಪ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ.
ಕಾಯಂ ಶಿಕ್ಷಕರನ್ನು ನೇಮಿಸಿ... ಶಾಸಕರ ಎದುರಲ್ಲೇ ಬಿಇಒಗೆ ವಿದ್ಯಾರ್ಥಿನಿ ತಾಕೀತು... ವಿಡಿಯೋ ವೈರಲ್ - ಬಿಇಒಗೆ ಅವಾಜ್
ರಾಯಚೂರಿನ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಶಿಕ್ಷಕರ ಕೊರತೆಗೆ ಪರಿಹಾರ ಸೂಚಿಸದ ಬಿಇಒಗೆ ಶಾಸಕರ ಸಮ್ಮುಖದಲ್ಲಿಯೇ ವಿದ್ಯಾರ್ಥಿನಿಯೊಬ್ಬಳು, ನಮ್ಮ ಶಾಲೆಗೆ ಕೂಡಲೇ ಕಾಯಂ ಶಿಕ್ಷಕರನ್ನು ನೇಮಿಸುವಂತೆ ತಾಕೀತು ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಈ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಗಣಿತ, ಇಂಗ್ಲಿಷ್ ವಿಷಯದ ಶಿಕ್ಷಕರ ಕೊರತೆಯಿದೆ. ಹೀಗಾಗಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕರಿಗೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಶಾಲೆಗೆ ಭೇಟಿ ನೀಡಿ ವಿಚಾರಿಸಿದ ಶಾಸಕರು, ವಿದ್ಯಾರ್ಥಿನಿ ಸಮಸ್ಯೆ ಆಲಿಸಿ ಬಿಇಒಗೆ ಕರೆ ಮಾಡಿ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ಬಳಿಕ ವಿದ್ಯಾರ್ಥಿನಿಗೆ ಮೊಬೈಲ್ ಕೊಟ್ಟು ಬಿಇಒ ಜೊತೆ ಮಾತನಾಡಿಸಿದರು.
ನಮಗೆ ಕಾಯಂ ಶಿಕ್ಷಕರನ್ನ ಒದಗಿಸುವಂತೆ ಕೇಳಿದ್ದಾಳೆ. ಇದಕ್ಕೂ ಮುನ್ನ ಶಾಲಾ ವಿದ್ಯಾರ್ಥಿಗಳು ಹಲವು ಬಾರಿ ಮನವಿ ಸಲ್ಲಿಸಿ ಪ್ರತಿಭಟನೆ ಸಹ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಬೇಸತ್ತ ವಿದ್ಯಾರ್ಥಿನಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಬಿಇಒಗೆ ತಾಕೀತು ಮಾಡಿದ್ದಾಳೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.