ರಾಯಚೂರು: ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಭಾರತೀಯ ಯೋಧರಿಗೆ ದೇಶಾದ್ಯಂತ ಶ್ರದ್ಧಾಂಜಲಿ, ನೆರವು ನೀಡುತ್ತಿದ್ದು, ಇತ್ತ ನಗರದಲ್ಲಿಯೂ ವಿದ್ಯಾರ್ಥಿಗಳು ಹಣ ಸಂಗ್ರಹಿಸಲು ಮುಂದಾಗಿದ್ದಾರೆ.
ಹುತಾತ್ಮ ಯೋಧರ ಕುಟುಂಬಗಳಿಗೆ ವಿದ್ಯಾರ್ಥಿಗಳಿಂದ ಹಣ ಸಂಗ್ರಹ - ಹಣ ಸಂಗ್ರಹ
ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧರ ಕುಟುಂಬಕ್ಕೆ ಹಣ ಸಂಗ್ರಹಿಸಲು ರಾಯಚೂರಿನ ವಿದ್ಯಾರ್ಥಿಗಳು ಮುಂದಾಗಿದ್ದಾರೆ.
ಹುತಾತ್ಮ ಯೋಧರ ಕುಟುಂಬಗಳಿಗೆ ಹಣ ಸಂಗ್ರಹಿಸುತ್ತಿರುವ ವಿದ್ಯಾರ್ಥಿಗಳು
ನಗರದ ಆಪ್‌ಟೈಮ್ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ಹಾಗೂ ಮನೆಮನೆಗೆ ತೆರಳಿ ಡಬ್ಬಿ ಹಿಡಿದು ಹಣ ಸಂಗ್ರಹಿಸುತ್ತಿದ್ದಾರೆ. ಸಂಗ್ರಹಿಸಿದ ಹಣವನ್ನು ಹುತಾತ್ಮ ಯೋಧರ ಕುಟುಂಬಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಹಣ ರವಾನಿಸಲಾಗುವುದು ಎಂದು ವಿದ್ಯಾರ್ಥಿಗಳು ತಿಳಿಸಿದರು.