ಕರ್ನಾಟಕ

karnataka

ETV Bharat / state

ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಕೋವಿಡ್ ಕಾರಣದಿಂದಾಗಿ ಕಳೆದ 10 ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ - ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿವೆ. ಆದರೆ, ಮಸ್ಕಿ ತಾಲೂಕಿನ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದೆ.

students-protest-demanding-proper-bus-system
ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

By

Published : Jan 19, 2021, 11:28 AM IST

ರಾಯಚೂರು:ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲೆಯ ಮಸ್ಕಿ ತಾಲೂಕಿನ ಕೊಂಬಾಳ ಗ್ರಾಮದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಕೋವಿಡ್ ಕಾರಣದಿಂದಾಗಿ ಕಳೆದ 10 ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ - ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿವೆ. ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದೆ. ಸಿಂಧನೂರಿನಿಂದ ನಂಜಲದಿನ್ನಿ ಗ್ರಾಮಕ್ಕೆ ನಿತ್ಯ ಒಂದು ಸಾರಿಗೆ ಬಸ್ ಸಂಚರಿಸುತ್ತದೆ. 13 ಹಳ್ಳಿಗಳ ಮಾರ್ಗವಾಗಿ ಬರುವ ಈ ಬಸ್​ನಲ್ಲಿಯೇ ನೂರಾರು ವಿದ್ಯಾರ್ಥಿಗಳು ಕಾಲೇಜಿಗೆ ತೆರಳುತ್ತಾರೆ. ಒಂದೊಂದು ದಿನ ಈ ಬಸ್​ನಲ್ಲೂ ಜಾಗವಿಲ್ಲದೇ, ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಓದಿ:ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ... ದ್ವಿವೇದಿಗೆ ಜೈಲೇ ಗತಿ!

ಬಸ್ ವ್ಯವಸ್ಥೆ ಕಲ್ಪಿಸುವಂತೆ ಹಲವಾರು ಬಾರಿ ವಿದ್ಯಾರ್ಥಿಗಳು ಮನವಿ ಮಾಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ, ಇಂದು ಕೊಂಬಾಳ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ.

ABOUT THE AUTHOR

...view details