ರಾಯಚೂರು:ರಾಯಚೂರು ವಿಶ್ವವಿದ್ಯಾಲಯವನ್ನು ಕೂಡಲೇ ಆರಂಭಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಇಂದು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ತಕ್ಷಣವೇ ರಾಯಚೂರು ವಿವಿ ಆರಂಭಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ.. - Raichur University
2017ರ ಫೆಬ್ರವರಿ ತಿಂಗಳಲ್ಲಿ ಅಂದಿನ ಸರ್ಕಾರ ರಾಯಚೂರು ವಿಶ್ವವಿದ್ಯಾಲಯ ಆರಂಭಿಸುವುದಾಗಿ ಘೋಷಿಸಿತ್ತು. ಆದರೆ, ಈವರೆಗೂ ವಿವಿ ಪ್ರಾರಂಭವಾಗಿಲ್ಲ. ಹೀಗಾಗಿ ಸರ್ಕಾರ ಕೂಡಲೇ ರಾಯಚೂರು ವಿವಿ ಪ್ರಾರಂಭಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಪ್ರತಿಭಟನೆ
ನಗರದ ಎಲ್‌ವಿಡಿ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ನಾನಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ.2017ರ ಫೆಬ್ರವರಿ ತಿಂಗಳಲ್ಲಿ ಅಂದಿನ ಸರ್ಕಾರ ರಾಯಚೂರು ವಿಶ್ವವಿದ್ಯಾಲಯವನ್ನ ಆರಂಭಿಸುವಂತೆ ಘೋಷಣೆ ಮಾಡಿತ್ತು. ಆದರೆ, ಈವರೆಗೂ ವಿಶ್ವವಿದ್ಯಾಲಯ ಪ್ರಾರಂಭವಾಗಿಲ್ಲ. ಹೀಗಾಗಿ ಸರ್ಕಾರ ಕೂಡಲೇ ರಾಯಚೂರು ವಿವಿ ಪ್ರಾರಂಭಿಸುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.