ಕರ್ನಾಟಕ

karnataka

ETV Bharat / state

ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹಿಸಿ ಎಸ್​ಯುಸಿಐ ಪ್ರತಿಭಟನೆ - Raichuru Latest protest news

ಕೃಷ್ಣಾ, ಭೀಮಾ ನದಿಯಲ್ಲಿ ಉಂಟಾದ ಪ್ರವಾಹದಿಂದ ರಾಯಚೂರಿನಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೋಶಿಯಲ್ ಯೂನಿಟಿ ಸೆಂಟರ್ ಆಫ್‌ ಇಂಡಿಯಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ರಾಯಚೂರಿನಲ್ಲಿ ಎಸ್​ಯುಸಿಐ ಪ್ರತಿಭಟನೆ
ರಾಯಚೂರಿನಲ್ಲಿ ಎಸ್​ಯುಸಿಐ ಪ್ರತಿಭಟನೆ

By

Published : Oct 22, 2020, 3:22 PM IST

ರಾಯಚೂರು:ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಹಾಗೂ ಕೃಷ್ಣಾ, ಭೀಮಾ ನದಿಯಲ್ಲಿ ಉಂಟಾದ ಪ್ರವಾಹದಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೋಶಿಯಲ್ ಯೂನಿಟಿ ಸೆಂಟರ್ ಆಫ್‌ ಇಂಡಿಯಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ರಾಯಚೂರಿನಲ್ಲಿ ಎಸ್​ಯುಸಿಐ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು, ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಪ್ರಾಣ ಹಾನಿ, ಸಾವಿರಾರು ಎಕರೆ ಬೆಳೆ ಹಾನಿಯಾಗಿದೆ. ಕೃಷ್ಣ, ಭೀಮಾ ನದಿಯ ಪ್ರವಾಹದಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ 18 ಜನರು, 78ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿದೆ. 700 ಮನೆಗಳು ಕುಸಿದಿದ್ದು, ಸುಮಾರು 2400 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ ಎಂದರು.

ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹಾನಿಯಾಗಿವೆ. ಆದ್ದರಿಂದ ಜಿಲ್ಲಾಡಳಿತ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details