ಕರ್ನಾಟಕ

karnataka

ETV Bharat / state

ರಾಯಚೂರು: ರೈಲ್ವೆ ಖಾಸಗೀಕರಣ ವಿರೋಧಿಸಿ ಎಸ್‌ಯುಸಿಐ ಪ್ರತಿಭಟನೆ - ರಾಯಚೂರು ಪ್ರತಿಭಟನೆ ಸುದ್ದಿ

ಕೇಂದ್ರದ ಬಿಜೆಪಿ ಸರ್ಕಾರ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿರುವುದನ್ನು ವಿರೋಧಿಸಿ ಎಸ್‌ಯುಸಿಐ ವತಿಯಿಂದ ರಾಯಚೂರು ನಗರದ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಯಿತು.

SUCI protests against railway privatization
ರಾಯಚೂರು: ರೈಲ್ವೆ ಖಾಸಗೀಕರಣ ವಿರೋಧಿಸಿ ಎಸ್‌ಯುಸಿಐ ಪ್ರತಿಭಟನೆ

By

Published : Sep 16, 2020, 3:39 PM IST

ರಾಯಚೂರು: ಭಾರತೀಯ ರೈಲ್ವೆಯನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಎಸ್‌ಯುಸಿಐ ವತಿಯಿಂದ ನಗರದ ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.

ರಾಯಚೂರು: ರೈಲ್ವೆ ಖಾಸಗೀಕರಣ ವಿರೋಧಿಸಿ ಎಸ್‌ಯುಸಿಐ ಪ್ರತಿಭಟನೆ

ರೈಲ್ವೆ ಅಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಅವರಿಗೆ ಸಲ್ಲಿಸಿದ ಎಸ್‌ಯುಸಿಐ ಪದಾಧಿಕಾರಿಗಳು, ಸಾರ್ವಜನಿಕರ ಹಣಕಾಸು ನೆರವಿನಿಂದ ಬೆಳೆದ ರೈಲ್ವೆ ಅತಿದೊಡ್ಡ ಸಾರಿಗೆಯಾಗಿದೆ. ಇದು ಭಾರತೀಯ ರೈಲ್ವೆ ದೇಶದಾದ್ಯಂತ 20 ದಶಲಕ್ಷಕ್ಕೂ ಹೆಚ್ಚು ಜನರ ಜೀವನಾಡಿಯಾಗಿದ್ದು, ವಿಶ್ವದ ಏಳನೆಯ ಅತಿದೊಡ್ಡ ಉದ್ಯೋಗದಾತ ಸಂಸ್ಥೆಯಾಗಿದೆ. ವಿಶ್ವದ 7ನೇ ಅತಿದೊಡ್ಡ ರೈಲ್ವೆ ಜಾಲವಾಗಿದೆ. ದೇಶದ 109 ಮಾರ್ಗಗಳಲ್ಲಿ 151 ರೈಲುಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ರಾಜ್ಯದ 14 ಮಾರ್ಗಗಳನ್ನು ಖಾಸಗೀಕರಣಗೊಳಿಸಲಾಗುತ್ತಿದ್ದು, ಸದರಿ ಮಾರ್ಗಗಳಲ್ಲಿ ಪ್ರಯಾಣ ದರ ದುಬಾರಿಯಾಗಲಿದೆ. ಇದರ ಪರಿಣಾಮ ಜನಸಾಮಾನ್ಯರ ಮೇಲೆ ಬೀಳಲಿದೆ. ಕೂಡಲೇ ರೈಲ್ವೆ ಖಾಸಗೀಕರಣ ಕೈಬಿಡಬೇಕೆಂದು ಒತ್ತಾಯಿಸಿದರು.

ABOUT THE AUTHOR

...view details