ರಾಯಚೂರು:ಸರಕು ಸಾಗಟ ಮಾಡುವ ಟಂಟಂ ವಾಹನ ಪಲ್ಟಿಯಾಗಿ ಆರು ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.
ಚಾಲಕನ ನಿರ್ಲಕ್ಷ್ಯದಿಂದ ಟಂಟಂ ವಾಹನ ಪಲ್ಟಿ: ಆರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಕರೆದೊಯ್ಯುತ್ತಿದ್ದ ಟಂಟಂ ವಾಹನ ಚಾಲಕನ ನಿರ್ಲಕ್ಷ್ಯದಿಂದಾಗಿ ಪಲ್ಟಿಯಾಗಿದ್ದು, ಆರು ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯವಾಗಿದೆ.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹುಣಿಸೇಡ್ ಗ್ರಾಮದಲ್ಲಿ ಬಳಿ ಈ ದುರ್ಘಟನೆ ಜರುಗಿದೆ. ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಕರೆದೊಯ್ಯುವ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಜರುಗಿದೆ. 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇವರೆಲ್ಲಾ ಸಿರವಾರ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿಯರು ಎಂದು ಗುರುತಿಸಲಾಗಿದ್ದು, ವಲಯ ಮಟ್ಟದ ಕ್ರೀಡಾಕೂಟಕ್ಕೆ ಕುರಕುಂದಾಕ್ಕೆ ತೆರಳಿ, ಕ್ರೀಡಾಕೂಟದಲ್ಲಿ ಭಾಗವಹಿಸಿ ವಾಪಸ್ ಬರುವ ವೇಳೆ ಈ ಘಟನೆ ಸಂಭವಿಸಿದೆ. ಆನಂತರ ಸ್ಥಳೀಯರು ಕೂಡಲೇ ಕ್ರೂಸರ್ ವಾಹನದ ಮೂಲಕ ಸಿರವಾರ ಸರಕಾರಿ ಆಸ್ಪತ್ರೆಗೆ ವಿದ್ಯಾರ್ಥಿನಿಯರನ್ನು ಚಿಕಿತ್ಸೆಗೆಂದು ರವಾನಿಸಿದರು. ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ವಿದ್ಯಾರ್ಥಿನಿಯರನ್ನು ರವಾನಿಸಲಾಗಿದೆ.