ರಾಯಚೂರು:ಯುವಕನೋರ್ವ ಕೋಮು ಭಾವನೆ ಕೆರಳಿಸುವಂತಹ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದರಿಂದ ವಿವಾದ ಏರ್ಪಟ್ಟಿದ್ದು, ದೇವದುರ್ಗ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಜನ ಸೇರಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಕೋಮು ಭಾವನೆಗೆ ಧಕ್ಕೆ ತರುವಂತಹ ವಾಟ್ಸಪ್ ಸ್ಟೇಟಸ್: ದೇವದುರ್ಗ ಪೊಲೀಸ್ ಠಾಣೆ ಮುಂದೆ ಉದ್ವಿಗ್ನ ಪರಿಸ್ಥಿತಿ
ಅನ್ಯ ಕೋಮಿನ ವ್ಯಕ್ತಿಯೊಬ್ಬ ಮತ್ತೊಂದು ಕೋಮಿನ ಭಾವನೆಗೆ ಧಕ್ಕೆ ತರುವಂತಹ ವಾಟ್ಸಪ್ ಸ್ಟೇಟಸ್ ಹಾಕಿದ್ದರಿಂದ ದೇವದುರ್ಗ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಯುವಕನೋರ್ವ ತನ್ನ ವಾಟ್ಸಪ್ನಲ್ಲಿ ಕೋಮು ಸಾಮರಸ್ಯ ಕದಡುವಂತಹ ಸ್ಟೇಟಸ್ ಹಾಕಿಕೊಂಡಿದ್ದು ಆ ವ್ಯಕ್ತಿಯನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸುಮಾರು 50ಕ್ಕೂ ಹೆಚ್ಚು ಜನರು ಪೊಲೀಸ್ ಠಾಣೆ ಮುಂದೆ ಹಾಜರಾಗಿದ್ದಾರೆ. ಪೊಲೀಸರು ಹಾಗೂ ಜಮಾವಣೆಗೊಂಡ ಗುಂಪಿನ ಮಧ್ಯೆ ವಾಗ್ವಾದ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು ಹೆಚ್ಚುವರಿ ಪೊಲೀಸರ ನಿಯೋಜನೆಗೆ ಇಲಾಖೆ ಕ್ರಮ ಕೈಗೊಂಡಿದೆ. ಅನ್ಯ ಕೋಮಿನ ವ್ಯಕ್ತಿಯೊಬ್ಬ ಮತ್ತೊಂದು ಕೋಮಿನ ಭಾವನೆಗೆ ಧಕ್ಕೆ ತರುವಂತಹ ವಾಟ್ಸಪ್ ಸ್ಟೇಟಸ್ ಹಾಕಿದ್ದರಿಂದ ಈ ವಾಗ್ವಾದ ನಡೆದಿದೆ ಎನ್ನಲಾಗುತ್ತಿದೆ.