ರಾಯಚೂರು : ಲಿಂಗಸುಗೂರು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಶ್ರಮಿಸಬೇಕು ಎಂದು ಶಾಸಕ ಡಿ.ಎಸ್. ಹೂಲಗೇರಿ ಸಲಹೆ ನೀಡಿದರು.
'ಲಿಂಗಸುಗೂರನ್ನು ಮಾದರಿ ಕ್ಷೇತ್ರವನ್ನಾಗಿಸಲು ಅಧಿಕಾರಿಗಳು ಶ್ರಮಿಸಲಿ' - MLA D.S. Hulagari
ಕೋವಿಡ್-19 ನಿರ್ವಹಣೆಯಲ್ಲಿ ತಾವು ಸಾಕಷ್ಟು ಶ್ರಮ ವಹಿಸಿದ್ದೀರಿ. ಸಾಮಾಜಿಕ ಅಂತರ ಕಾಯ್ದು ಮಾಸ್ಕ್, ಕೈ ಕವಚ ನೀಡುವ ಜೊತೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಿರ್ವಹಣೆ ಸಮಸ್ಯೆಯಿಂದ ಕುಡಿವ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣವೆ ಕ್ರಮ ತೆಗೆದುಕೊಳ್ಳಿ ಎಂದು ಶಾಸಕ ಡಿ.ಎಸ್. ಹೂಲಗೇರಿ ತಿಳಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತುರ್ತು ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್-19 ನಿರ್ವಹಣೆಯಲ್ಲಿ ತಾವು ಸಾಕಷ್ಟು ಶ್ರಮ ವಹಿಸಿದ್ದಿರಿ. ಗ್ರಾಮದ ಸಮಗ್ರ ಸ್ವಚ್ಛತೆ, ಕುಡಿವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರಿಕೆ ವಹಿಸಬೇಕು. ಉದ್ಯೋಗಖಾತ್ರಿ ಯೋಜನೆ ಅನುಷ್ಠಾನದಲ್ಲಿ ಜನರಿಗೆ ಹೆಚ್ಚು ಕೆಲಸ ನೀಡಬೇಕು. ಸಾಮಾಜಿಕ ಅಂತರ ಕಾಯ್ದು ಮಾಸ್ಕ್, ಕೈ ಕವಚ ನೀಡುವ ಜೊತೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಿರ್ವಹಣೆ ಸಮಸ್ಯೆಯಿಂದ ಕುಡಿವ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣವೆ ಕ್ರಮಕ್ಕೆ ಹಿರಿಯ ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದರು.
14 ನೇ ಹಣಕಾಸು ಯೋಜನೆ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳನ್ನು ಜನರ ವಿಶ್ವಾಸದೊಂದಿಗೆ ಕ್ರಮ ಬದ್ಧವಾಗಿಯೆ ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎಂದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶ್ವೇತಾ ವೆಂಕನಗೌಡ ಪಾಟೀಲ ಮಾತನಾಡಿ, ಬಹುತೇಕ ಪಿಡಿಒಗಳು ಹೇಳಿದ ಕೆಲಸ ಮಾಡುತ್ತಿಲ್ಲ. ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ಅವರು ಸಹಕಾರ ನೀಡುತ್ತಿಲ್ಲ ಎಂದು ಸಭೆಯಲ್ಲಿ ಬಹಿರಂಗವಾಗಿಯೇ ಅಳಲು ತೋಡಿಕೊಂಡರು.