ರಾಯಚೂರು:ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಕರ್ತವ್ಯದಲ್ಲಿದ್ದ ಗುತ್ತಿಗೆ ಕಾರ್ಮಿಕ ಬಿದ್ದು ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಹಟ್ಟಿ ಚಿನ್ನದ ಗಣಿಯಲ್ಲಿ ಕರ್ತವ್ಯದಲ್ಲಿದ್ದ ಗುತ್ತಿಗೆ ಕಾರ್ಮಿಕ ಸಾವು - death of a contract laborer on duty
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಗುತ್ತಿಗೆ ಕಾರ್ಮಿಕ ಬಾಲ್ ಮಿಲ್ ವಿಭಾಗದಲ್ಲಿ ಮೇಲಿನಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಶನಿವಾರ ಮೃತಪಟ್ಟಿದ್ದು, ಈ ಘಟನೆ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕರ್ತವ್ಯದಲ್ಲಿದ್ದ ಗುತ್ತಿಗೆ ಕಾರ್ಮಿಕ ಸಾವು
ಶುಕ್ರವಾರ ಕರ್ತವ್ಯಕ್ಕೆ ಹೋಗಿದ್ದ ಕಾರ್ಮಿಕ ನಾಗರಾಜ (25) ಬಾಲ್ ಮಿಲ್ ವಿಭಾಗದಲ್ಲಿ ಮೇಲಿನಿಂದ ಕೆಳಗೆ ಬಿದ್ದಿದ್ದರಿಂದ ತೀವ್ರ ಗಾಯಗೊಂಡಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮೃತಪಟ್ಟ ಘಟನೆ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಹಟ್ಟಿ ಚಿನ್ನದ ಗಣಿ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ ಬಹದ್ದೂರು, ಪಿಎಸ್ಐ ಮುದ್ದುರಂಗಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.