ರಾಯಚೂರು: ಮೊಳಕಾಲ್ಮೂರನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಬೇಕು ಎನ್ನುವುದು ಅಲ್ಲಿನ ಹೋರಾಟಗಾರರ ಬೇಡಿಕೆಯಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ರೇಣುಕಾಚಾರ್ಯ, ರಮೇಶ್ ಜಾರಕಿಹೊಳಿ ಅವರು ಏನು ಹೇಳಿಕೆ ನೀಡಿದ್ದಾರೋ, ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ನಾನು ಡಿಸಿಎಂ ಆಗಬೇಕು ಎಂಬುದು ಜನರ ಬೇಡಿಕೆಯಾಗಿದೆ. ಇದರ ಬಗ್ಗೆ ಪಕ್ಷದ ವೇದಿಕೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬಳ್ಳಾರಿ ಜಿಲ್ಲೆಗೆ ಮೊಳಕಾಲ್ಮೂರನ್ನು ಸೇರಿಸಬೇಕು ಸಚಿವ ಶ್ರೀರಾಮುಲು ಈ ವೇಳೆ ಸಚಿವ ಆನಂದ್ ಸಿಂಗ್ ಮಾತನಾಡಿ, ಕಂಪ್ಲಿ ಬಳ್ಳಾರಿ ಜಿಲ್ಲೆಗೆ ಸೇರಿಸಬೇಕು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲರಿಗೂ ಹೋರಾಟದ ಮೂಲಕ ಬೇಡಿಕೆ ಸಲ್ಲಿಸುವ ಹಕ್ಕಿದೆ. ಈ ಬಗ್ಗೆ ಕಾನೂನಾತ್ಮಕವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಂಪ್ಲಿ ಶಾಸಕ ಗಣೇಶ ತೊಡೆ ತಟ್ಟಿರುವುದಕ್ಕೆ ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.
ಗ್ರಾಪಂ ಚುನಾವಣೆ ನೀತಿ ಸಂಹಿತೆ ಜಾರಿ : ಇಲಾಖೆ ಸಭೆ ಮುಂದೂಡಿದ ಸಚಿವ ಜಾರಕಿಹೊಳಿ
ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಸುಳ್ಳು ಹೇಳುವುದರಲ್ಲಿ ಯಡಿಯೂರಪ್ಪ ಮಿನಿ ಮೋದಿ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಆಧಾರ ರಹಿತವಾಗಿ ಮಾತನಾಡುತ್ತಾರೆ. ಮೋದಿ ಯಾವುದನ್ನು ಹೇಳುತ್ತಾರೋ ಅದನ್ನು ಮಾಡುತ್ತಾರೆ. ಕೊಟ್ಟ ಮಾತು ಉಳಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದರು. 5ಎ ಕಾಲುವೆ ನೀರಿಗಾಗಿ ರೈತರ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಸ್ಕಿ ಉಪಚುನಾವಣೆಯ ಮುನ್ನ ನೀರಾವರಿಯ ಎಲ್ಲ ಯೋಜನೆಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. 5 A ಕಾಲುವೆ ಹೋರಾಟಗಾರರೊಂದಿಗೆ ನಾನು ಮಾತನಾಡುತ್ತೇನೆ ಎಂದರು.