ರಾಯಚೂರು: ಕೊರೊನಾ ಸೋಂಕಿನಿಂದ ಗುಣಮುಖ ಹೊಂದಿದ್ದ ವೃದ್ಧ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ರಾಗಲಪರ್ವಿ ಗ್ರಾಮದಲ್ಲಿ ನಡೆದಿದೆ.
ರಾಯಚೂರು: ಕೊರೊನಾ ಸೋಂಕಿನಿಂದ ಗುಣಮುಖರಾದ್ರೂ ವೃದ್ಧ ಆತ್ಮಹತ್ಯೆ - Raichur
ಕೊರೊನಾ ಸೋಂಕಿನಿಂದ ಗುಣಮುಖ ಹೊಂದಿದ್ದ ವೃದ್ಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹತ್ಯೆ
ಸಿಂಧನೂರು ತಾಲೂಕಿನ ರಾಗಲಪರ್ವಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದ್ದು, 65 ವರ್ಷದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದಿಲ್ಲ, ಆದರೆ ಇವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರು. ಬಳಿಕ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಬಳ್ಳಾರಿಯ ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಹೊಂದಿದ್ದು, ರಾಗಲಪರ್ವಿ ಗ್ರಾಮಕ್ಕೆ ಬಂದ ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಘಟನೆಯ ಕುರಿತಂತೆ ಈವರೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.