ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯಕ್ಕಿಳಿದಿದೆ. ಕೊರೊನಾ ಪರೀಕ್ಷೆಗೆ ಒಳಗಾದ 1,132 ಜನರ ಎಲ್ಲ ವರದಿಗಳು ನೆಗೆಟಿವ್ ಬಂದಿದ್ದರಿಂದ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಕೆಲ ದಿನಗಳಿಂದ ಸೋಂಕಿತರ ಗಣನೀಯ ಇಳಿಮುಖವಾದರೂ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯವಾಗಿರುವ ವರದಿ ಬಂದಿದಲಿಲ್ಲ. ಸದ್ಯ ಜಿಲ್ಲೆಯಲ್ಲಿ 61 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಒಪೆಕ್ ಹಾಗೂ ರಿಮ್ಸ್ ಆಸ್ಪತ್ರೆಯಲ್ಲಿ 11 ಜನರಿಗೆ, ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ.