ಕರ್ನಾಟಕ

karnataka

ETV Bharat / state

ರಾಯಚೂರಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ: ಮೂವರು ಸಾವು, ಇಬ್ಬರು ಗಂಭೀರ - ರಾಯಚೂರಲ್ಲಿ ಕಾರುಗಳ ನಡುವೆ ಡಿಕ್ಕಿ

ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಯಚೂರಲ್ಲಿ ಅಪಘಾತವಾಗಿ ಮೂವರ ಸಾವು
ರಾಯಚೂರಲ್ಲಿ ಅಪಘಾತವಾಗಿ ಮೂವರ ಸಾವು

By

Published : Apr 20, 2022, 3:07 PM IST

Updated : Apr 20, 2022, 3:31 PM IST

ರಾಯಚೂರು: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಿಂಗಸೂಗೂರು ತಾಲೂಕಿನ ಗುರುಗುಂಟಾದ ಗೋಲಪಲ್ಲಿ ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಯಾದಗಿರಿಗೆ ಸಂಚರಿಸುತ್ತಿದ್ದ ಕಾರು ಹಾಗು ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದರೆ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ.


ಯಾದಗಿರಿ ಜಿಲ್ಲೆಯ ವಡಗೇರ ಗ್ರಾಮದ ಅಮರೇಶ್ (30), ಗೋವಿಂದ್ (35) ದೇವರಾಜ್ (34) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮದುವೆಗೆಂದು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ಜರುಗಿದೆ. ಗಾಯಾಳುಗಳನ್ನು ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳ ಹಟ್ಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿದೆ.


ಇದನ್ನೂ ಓದಿ:ಸ್ನಾನಕ್ಕೆಂದು ತೆರಳಿದ್ದ ಆಶ್ರಮದ ಬಾಲಕಿಯರು.. ಕಾಲುವೆ ನೀರಿನ ರಭಸಕ್ಕೆ ನಾಲ್ವರು ನೀರುಪಾಲು

Last Updated : Apr 20, 2022, 3:31 PM IST

ABOUT THE AUTHOR

...view details