ರಾಯಚೂರು: ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರಿನಲ್ಲಿ ಮೂವರು ಸಾವು: ಕೊರೊನಾ ಸೋಂಕಿನ ಶಂಕೆ! - ರಾಯಚೂರಿನಲ್ಲಿ ಮೂವರು ಕೊರೊನಾ ಸೋಂಕಿತರು ಸಾವು,
ರಾಯಚೂರು ಜಿಲ್ಲೆ ಮೂವರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ. ಇವರಿಗೆ ಕೊರೊನಾ ಸೋಂಕು ಅಂಟಿರಬಹುದೆಂದು ಶಂಕಿಸಲಾಗಿದೆ.
ರಾಯಚೂರಿನಲ್ಲಿ ಮೂವರು ಸಾವು
ರಾಯಚೂರು ನಗರದ 62 ವರ್ಷದ ವೃದ್ಧ, ಯರಮರಸ್ ಕ್ಯಾಂಪಿನ 44 ವರ್ಷದ ವ್ಯಕ್ತಿ ಹಾಗೂ ಸಿಂಧನೂರು ತಾಲೂಕಿನ ಕೆ.ಹಂಚಿನಾಳದ 64 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಮೂವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೂವರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ.
ಇನ್ನು ಕೋವಿಡ್ ಮಾರ್ಗಸೂಚಿ ಅನ್ವಯ ಮೂವರ ಅಂತ್ಯಕ್ರಿಯೆ ನಡೆಸಲಾಗುತ್ತಿದೆ.