ರಾಯಚೂರು:ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ಹೊರವಲಯದಲ್ಲಿ ಜರುಗಿದೆ. ಮೃತರನ್ನ ವಿರುಪಾಕ್ಷಪ್ಪಗೌಡ ( 45), ಮಲ್ಲಮ್ಮ (38), ಮತ್ತೊಬ್ಬ ಹಟ್ಟಿ ಗಣಿ ಕಾರ್ಮಿಕ ಎಂದು ಗುರುತಿಸಲಾಗಿದೆ.
ಓವರ್ಟೇಕ್ ಮಾಡುವ ಭರದಲ್ಲಿ ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಓರ್ವ ಮಹಿಳೆ ಸೇರಿ ಮೂವರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.