ರಾಯಚೂರು: ಜಿಲ್ಲೆಯ ತುರುವಿನಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ ಮಾಡಲಾಗಿದೆ.
ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ - ಅಪ್ರಾಪ್ತೆ ಮೇಲಿನ ಅತ್ಯಾಚಾರ ಕೇಸ್
ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪೊಲೀಸರು ಮೂವರು ಆರೋಪಿಗಳ ಬಂಧನ ಮಾಡಿದ್ದಾರೆ.
Three rapist arrest in Raichur
ಬಂಧಿತರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದು, ಮತ್ತೋರ್ವ ಯುವಕನಾಗಿದ್ದಾನೆ. ಕಳೆದ ಫೆ. 2ರಂದು ಬಾಲಕಿ ಕಾಣೆಯಾಗಿರುವ ಕುರಿತಂತೆ ತುರುವಿನಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು, ಓರ್ವ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಮತ್ತಿಬ್ಬರು ಆರೋಪಿಗಳನ್ನು ಬೇರೆ ಕಡೆ ಬಂಧಿಸಿದ್ದಾರೆ. ಇವರು ಗಂಗಾವತಿ ಮೂಲದವರು ಎಂದು ತಿಳಿದು ಬಂದಿದೆ.